ಜನ ಮನದ ನಾಡಿ ಮಿಡಿತ

Advertisement

ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ: ಸಿ.ಎಂ.ಸಿದ್ದರಾಮಯ್ಯ

ಹೈಕೋರ್ಟ್ ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ED ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರಲು: ಸಿಎಂ

ಮಂಡ್ಯ (ಕೆ.ಆರ್.ಪೇಟೆ) ಡಿ4: ಹೈಕೋರ್ಟ್ ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ED ಯವರು ತಮ್ಮ ತನಿಖೆಯ ವಿವರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿರುವುದರ ಬಗ್ಗೆ ಮತ್ತು ಲೋಕಾಯುಕ್ತಕ್ಕೆ ಪತ್ರ ಬರೆದಿರುವುದರ ಹಿಂದಿನ ಉದ್ದೇಶದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ED ಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು , ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದರು.

ಈ ವಿಚಾರಕ್ಕೆ ಸಂಬಂಧಪಟ್ಟಂತೆನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ತಿಳಿಸಿದರು.

ಡಿಸೆಂಬರ್ 24 ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ED ಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದರು.

ನಾನು ಹೇಳಿದ್ನಾ?

ಮಂತ್ರಿ ಮಂಡಲ ಪುನಾರಚನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಂತ್ರಿಮಂಡಲ ಪುನಾರಚನೆ ಮಾಡ್ತೀವಿ ಅಂತ ನಾನು ಹೇಳಿದ್ನಾ? ನೀವೇ ನಿಮ್ಮ ಪಾಡಿಗೆ ನೀವು ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ ? ಈ ಬಗ್ಗೆ ಹೈ ಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ ಎಂದರು.

ನಾಳೆ ಹಾಸನದಲ್ಲಿ ನಡೆಯುತ್ತಿರುವ ಸಮಾವೇಷದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಕ್ಷದಿಂದ ಸಮಾವೇಷ ನಡೆಯುತ್ತಿದೆ ಎಂದರು.

ಸಚಿವರಾದ ಕೆ.ಎನ್.ರಾಜಣ್ಣ, ಚಲುವರಾಯಸ್ವಾಮಿ ಮತ್ತು ಶಾಸಕರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!