ಮಗುವಿನ ಮೇಲೆ ಅತ್ಯಾಚಾರ ಎಸಗಿದವನಿಗೆ ಸಿಕ್ಕಿತು ಕಠಿಣ ಶಿಕ್ಷೆ

ಬೆಳಗಾವಿ : ಎರಡೂವರೆ ವರ್ಷದ ಕಂದಮ್ಮನಿಗೆ ಅತ್ಯಾಚಾರವೆಸಗಿ ಕೊಲೆಗೆ ಯತ್ನಿಸಿದ್ದ ವ್ಯಕ್ತಿಗೆ ಪೋಕ್ಸೋ ನ್ಯಾಯಾಲಯ ಜೀವಾವಧಿ ಶಿಕ್ಷೆಯೊಂದಿಗೆ ೩೦ ಲಕ್ಷ ದಂಡವಿಧಿಸಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರಿನ ಆರೋಪಿಯಾಗಿರುವ ಮಹಾದೇವ ನಾಯ್ಕನಿಗೆ ಬೆಳಗಾವಿಯ ಪೋಕ್ಸೋ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
೨೦೧೭ರಲ್ಲಿ ಶಾಲಾ ವಠಾರದಲ್ಲಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಪುಟ್ಟ ಕಂದಮ್ಮನನ್ನು ಕೌಪಾಂಡ್ ಬಳಿ ಕರೆದುಕೊಂಡು ಹೋಗಿ ಗುಪ್ತಾನ್ಗಕ್ಕೆ ಹಾನಿಗೊಳಿಸಿದ್ದಾನೆ. ಬಳಿಕ ಕತ್ತು ಹಿಸುಕಿ ಕೊಂದುಹಾಕಲು ಪ್ರಯತ್ನಿಸಿದ್ದಾನೆ. ಫಲಿಸದೇ ಇದ್ದಾಗ ಇಷ್ಟಕ್ಕೆ ಬಿಡದೇ ಮಗುವನ್ನು ಮಣ್ಣಿನಲ್ಲಿ ಹೂತು ಹಾಕಿ ಪ್ರಕರಣ ಮುಚ್ಚು ಹಾಕಲು ಯತ್ನಿಸಿದ್ದಾನೆ. ಈ ವೇಳೆ ಜನರ ಕಣ್ಣಿಗೆ ಸಿಕ್ಕಿ ಬಿದ್ದಿದ್ದಾನೆ. ಘಟನೆ ತಿಳಿದ ಪೋಷಕರು ನೇಸರಗಿ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ. ಎಂ. ಪುಷ್ಪಲತಾರವರು ತಪ್ಪಿತಸ್ಥನಿಗೆ ಶಿಕ್ಷೆ ನೀಡಿ ಆದೇಶಿಸಿದ್ದಾರೆ. ಸಂತ್ರಸ್ತೆಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ೧ ಲಕ್ಷ ಪರಿಹಾರ ಪಡೆಯುವಂತೆ ಆದೇಶಿಸಿದ್ದಾರೆ.



