ಜನ ಮನದ ನಾಡಿ ಮಿಡಿತ

Advertisement

ಸೋಮೇಶ್ವರ ಸಮುದ್ರಕ್ಕೆ ಹಾರಿ ಆತ್ಮಹತ್ಯೆ..!

ಉಳ್ಳಾಲ : ಸೋಮೇಶ್ವರ ರುದ್ರಪಾದೆಯಿಂದ ಮದ್ಯಾಹ್ನ ವೇಳೆ ಹಾರಿದ ಮಂಗಳೂರಿನ ಪಡೀಲು ,ವೀರನಗರ ನಿವಾಸಿ ಉದಯ್ ಕುಮಾರ್ (46) ಮೃತದೇಹ ಸಮೀಪದ ಅಲಿಮಕಲ್ಲು ಎಂಬಲ್ಲಿ ಸಂಜೆ ಹೊತ್ತಿಗೆ ಪತ್ತೆಯಾಗಿದೆ.


ಪದವಿನಂಗಡಿಯಲ್ಲಿ ಕಟ್ಟಡ ಕಾಮಗಾರಿಯ ಬಿಡಿಭಾಗಗಳ ಮಾರಾಟದ ಅಂಗಡಿ ಹೊಂದಿರುವ ಅವರು ಮಧ್ಯಾಹ್ನ ಸೋಮೇಶ್ವರ ಸಮುದ್ರ ತೀರಕ್ಕೆ ಬಂದವರು ದ್ವಿಚಕ್ರ ವಾಹನ ಸಹಿತ ತನ್ನ ಬಳಿಯಿದ್ದ ಸೊತ್ತುಗಳನ್ನೆಲ್ಲಾ ಮೇಲಿಟ್ಟು ಸಮುದ್ರಕ್ಕೆ ಹಾರಿದ್ದಾರೆ. ಸಮುದ್ರ ತೀರದಲ್ಲಿದ್ದ ಯುವಕನೋರ್ವ ಸೊತ್ತುಗಳನ್ನು ಕಂಡು ಸಮೀಪದ ಅಂಗಡಿಯವರಲ್ಲಿ ನೀಡಿದ್ದಾರೆ. ಅವರು ಉಳ್ಳಾಲ ಪೊಲೀಸರಿಗೆ ನೀಡಿದ ಮಾಹಿತಿ ನಂತರ, ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸೇರಿದಂತೆ ಸ್ಥಳೀಯ ಈಜುಗಾರರು ಸಮುದ್ರದಲ್ಲಿ ಉದಯ್ ಗಾಗಿ ಟಯರ್ ಟ್ಯೂಬ್ ಬಳಸಿ ಶೋಧ ನಡೆಸಿದ್ದಾರೆ. ಸಂಜೆ ವೇಳೆ ಮೃತದೇಹ ಪತ್ತೆಯಾಗಿದ್ದು, ಮೃತರು ತಂದೆ, ತಾಯಿ, ಪತ್ನಿ, ಒರ್ವ ಪುತ್ರನನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!