ಜನ ಮನದ ನಾಡಿ ಮಿಡಿತ

Advertisement

ಒಂಟಿ ಮಹಿಳೆಯ ಸರ ಎಳೆದೊಯ್ದಿದ್ದ ಪ್ರಕರಣದ ಆರೋಪಿಯನ್ನು ಬಂಧಿಸಿದ ಬಚ್ಛೆ ಪೊಲೀಸರು..!

ಮಂಗಳೂರು; ತೆಂಕಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್ ಮಿಲ್ ಬಳಿ ಇರುವ ಒಳ ರಸ್ತೆಯಲ್ಲಿ ಡಿ.12ರಂದು ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಸರ ಎಳೆದೊಯ್ದಿದ್ದ ಪ್ರಕರಣದ ಆರೋಪಿಯನ್ನು ಬಚ್ಛೆ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.

ಹಳೆಯಂಗಡಿಯ ಇಂದಿರಾ ನಗರ ನಿವಾಸಿ ಅಬ್ದುಲ್ ರವೂಫ್ ಯಾನೆ ಆಟೋ ರವೂಫ್ (30) ಬಂಧಿತ ಆರೋಪಿ. ಈತನಿಂದ ಮಹಿಳೆಯ ಕುತ್ತಿಗೆಯಿಂದ ಎಳೆದೊಯ್ದಿದ್ದ 70 ಸಾವಿರ ರೂ. ಮೌಲ್ಯದ ಚಿನ್ನದ ಸರ, 50 ಸಾವಿರ ರೂ. ಮೌಲ್ಯದ ಸ್ಕೂಟರ್, 50 ಸಾವಿರ ರೂ. ಮೌಲ್ಯದ ಆಟೋ ರಿಕ್ಷಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈತನ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆ, ಮೂಲ್ಕಿ ಬಜ್ಜೆ, ಉಪ್ಪಿನಂಗಡಿ, ಹಾಸನ ಜಿಲ್ಲೆಯ ಅರೇಹಳ್ಳಿ ಪೊಲೀಸ್‌ ಠಾಣೆಯಲ್ಲಿ ಒಟ್ಟು 10 ಸುಲಿಗೆ ಮತ್ತು ಕಳವಿಗೆ ಸಂಬಂಧಿಸಿದ ಪ್ರಕರಣ ದಾಖಲಾಗಿದೆ. ಈತ 2 ತಿಂಗಳ ಹಿಂದೆ ಜಾಮೀನು ಪಡೆದು ಹೊರ ಬಂದಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!