ಜನ ಮನದ ನಾಡಿ ಮಿಡಿತ

Advertisement

ಬಾಳೆಪುಣಿ ಕೊರಗರ ಕಾಲನಿಗೆ ಊರಿನ ತ್ಯಾಜ್ಯ!; ದಲಿತ ಹೋರಾಟ ಸಮಿತಿಯಿಂದ ಉಗ್ರ ಹೋರಾಟದ ಎಚ್ಚರಿಕೆ

ಮಂಗಳೂರು: “ಬಂಟ್ವಾಳ ತಾಲೂಕು, ಬಾಳೆಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುದಕಟ್ಟೆ ಕೊರಗರ ಕಾಲನಿಯ ಆಸು ಪಾಸಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಾಗೂ ಸಾರ್ವಜನಿಕರು ವಾಸಿಸುವ ಮನೆಗಳ ಪಕ್ಕದಲ್ಲಿ ಬೇರೆ ಬೇರೆ ಕಡೆಗಳಿಂದ ತ್ಯಾಜ್ಯಗಳನ್ನು ಶೇಖರಿಸಿ 20 ಅಡಿ ಆಳದ ಹೊಂಡದಲ್ಲಿ ಹಾಕುತ್ತಿದ್ದು ಇದರಿಂದಾಗಿ ಪರಿಸರದಲ್ಲಿ ದುರ್ವಾಸನೆ ಹರಡಿ ಮಾರಕ ರೋಗಗಳಾದ ಡೆಂಗ್ಯೂ ಮಲೇರಿಯಾ ಮುಂತಾದ ರೋಗಗಳಿಗೆ ಇಲ್ಲಿಯ ಮಂದಿ ತುತ್ತಾಗುತ್ತಿದ್ದಾರೆ.ತಕ್ಷಣ ಇದನ್ನು ನಿಲ್ಲಿಸದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ“ ಎಂದು ಕರ್ನಾಟಕ ದಲಿತ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಎಸ್.ಪಿ. ಆನಂದ ಅವರು ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

 


”ಸದ್ರಿ ಹೊಂಡದ ಬದಿಯಲ್ಲಿಯೇ ಪಂಚಾಯತ್‌ ವತಿಯಿಂದ ಕೊರೆದ ಕೊಳವೆ ಬಾವಿ, ಹಾಗೇನೆ ಸರಕಾರದ ವತಿಯಿಂದ ತೋಡಿಸಲಾದ 2 ನೀರಿನ ಬಾವಿಗಳಿಗೆ ಈ ತ್ಯಾಜ್ಯ ಸಂಗ್ರಹದ ಕಲ್ಮಶ ನೀರು ಸೋರಿ ಬಾವಿಗಳ ಹಾಗೂ ಕೊಳವೆ ಬಾವಿಗಳ ನೀರನ್ನೇ ಈ ವಠಾರದಲ್ಲಿ ವಾಸಿಸುವ ಮಂದಿ ಕುಡಿಯಲು, ಅಡುಗೆ ಮಾಡಲು ಬಳಸುವಂತ ಪರಿಸ್ಥಿತಿ ಇದೆ. ಅದೂ ಅಲ್ಲದೆ ತ್ಯಾಜ್ಯದ ಪಕ್ಕದಲ್ಲಿಯೇ ಕಾರ್ಯಾಚರಿಸುತ್ತಿರುವ
ಅಂಗನವಾಡಿಯಲ್ಲಿ 15 ಮಂದಿ ಪುಟ್ಟ ಪುಟ್ಟ ಮಕ್ಕಳು ಕೂಡಾ ಈ ಪರಿಸರದಲ್ಲಿಯೇ ಇದ್ದಾರೆ. ಇದರ ಸಮೀಪವೇ ಶಾಲೆ ಇದ್ದು ಇಡೀ ಬಾಳೆಪುಣಿ ವಠಾರವೇ ದುರ್ಗಂಧಮಯವಾಗಿದ್ದು ಕುಡಿಯಲು ಶುದ್ಧ ನೀರಿಲ್ಲದೆ, ಉಸಿರಾಡಲು ಶುದ್ಧ ಗಾಳಿ ಇಲ್ಲದೆ ಬದುಕುತ್ತಿರುವ ಇಲ್ಲಿಯ ಜನರ, ಮಕ್ಕಳ, ಮಹಿಳೆಯರ ಬದುಕೇ ನರಕ ಸದೃಶ್ಯವಾಗಿದೆ ಮತ್ತು ಇದರ ಪಕ್ಕದಲ್ಲಿಯೇ ಕೊರಗಜ್ಜನ ದೈವಸ್ಥಾನ
ಹಾಗೂ ಇನ್ನಿತರ ಕೆಲವು ದೇವಸ್ಥಾನಗಳಿವೆ. ಇದರ ಬಗ್ಗೆ ಬಾಳೆಪುಣಿ ಗ್ರಾಮ ಪಂಚಾಯತ್‌ ಗೆ ದೂರು ನೀಡಿದ್ದರೂ ತ್ಯಾಜ್ಯ ಹಾಕುವ ಗುಂಡಿಯನ್ನು ಸದ್ರಿ ಗ್ರಾಮದಲ್ಲಿರುವ ಇತರ ಖಾಲಿ
ಸರಕಾರದ ಜಾಗ ಕೂಡಾ ಇದ್ದು ಸುಮಾರು 10 ಎಕ್ರೆ ಜಮೀನನ್ನು ಸರಕಾರದ ವಿವಿಧ ಯೋಜನೆಗೆ ಬಳಸಲು ಕಾದಿರಿಸಿದ್ದು ಸ್ಥಳಾಂತರಿಸಲು ವಿನಂತಿಸಿದರೂ ಗ್ರಾಮ ಪಂಚಾಯತ್ ಯಾವುದೇ ಕ್ರಮ
ಕೈಗೊಂಡಿಲ್ಲ“ ಎಂದು ಆರೋಪಿಸಿದರು.


ಪತ್ರಿಕಾಗೋಷ್ಟಿಯಲ್ಲಿ ಯಶವಂತ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!