ಜನ ಮನದ ನಾಡಿ ಮಿಡಿತ

Advertisement

ಪ್ರತ್ಯೇಕ ಪ್ರಕಣ 3 ಕಳ್ಳತನ ಆರೋಪಿಗಳ ಬಂಧನ..!

ಪುತ್ತೂರು: ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸರು ಮೂವರು ಮಹಿಳಾ ಆರೋಪಿಗಳನ್ನು ಶನಿವಾರ ಬಂಧಿಸಿ, ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

 


ಬೆಂಗಳೂರು ರಾಜಾಜಿನಗರ ನಿವಾಸಿಗಳಾದ ಜ್ಯೋತಿ ಹಾಗೂ ಯಶೋದ ಮತ್ತು ದ.ಕ.ಜಿಲ್ಲೆಯ ಮಂಗಳೂರು ನೀರುಮಾರ್ಗ ನಿವಾಸಿ ವಿದ್ಯಾ ಬಂಧಿತ ಆರೋಪಿಗಳು.
ದ.12 ರಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲು ಗ್ರಾಮದ ನಿವಾಸಿ ಶ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಯಾರೋ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 120/2024 ಕಲಂ: 303(2) ಬಿಎನ್‌ಎಸ್‌ ರಂತೆ ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಯಶೋದ ಎಂಬವರುಗಳನ್ನು ದಸ್ತಗಿರಿ ಮಾಡಿ, ಅವರಿಂದ ಕಳವಾದ ರೂ 25,000/- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.
ಇನ್ನೊಂದು ಪ್ರಕರಣದಲ್ಲಿ ಡಿ.13 ರಂದು ಪುತ್ತೂರು ಪೇಟೆಯ ಕೋರ್ಟ್ ರಸ್ತೆಯಲ್ಲಿರುವ ಜ್ಯುವೆಲ್ಲರ್ಸ್ ಶಾಪ್ ನಿಂದ ಚಿನ್ನ ಖರೀದಿ ಮಾಡುವ ನೆಪದಲ್ಲಿ ಬಂದು, ರೂ 77000 /- ಮೌಲ್ಯದ 09 ಗ್ರಾಂ ತೂಕದ 03 ಚಿನ್ನದ ಉಂಗುರಗಳನ್ನು ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಜ್ಯುವೆಲ್ಲರ್ಸ್ ಮಾಲಕರಾದ ಶಿವಪ್ರಸಾದ್‌ ಭಟ್‌ ಎಂಬವರು ನೀಡಿದ ದೂರಿನ ಮೇರೆಗೆ, ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 121/2024 ಕಲಂ: 305 ಬಿಎನ್‌ಎಸ್‌ ರಂತೆ ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಂಗಳೂರು ನೀರುಮಾರ್ಗ ನಿವಾಸಿ ವಿದ್ಯಾ ಎಂಬವರನ್ನು ದಸ್ತಗಿರಿ ಮಾಡಿ, ಕಳವಾದ ಒಟ್ಟು ರೂ 77000 /- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.

Leave a Reply

Your email address will not be published. Required fields are marked *

ಪುತ್ತೂರು: ಮುಳಿಯ ಗೋಲ್ಡ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ ಭಟ್ ನಿಧನ…!

ಮಂಗಳೂರು: ಮಗುವಿನ ಚಿಕಿತ್ಸೆಗೆ ರವಿ ಕಟಪಾಡಿಯಿಂದ ₹2.50 ಲಕ್ಷ ನೆರವು…!

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

error: Content is protected !!