ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..! ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ
Advertisement

ಕುಂದಾಪುರ: ಟೂರಿಸ್ಟ್ ಬೋಟ್ ಮಗುಚಿ ರೈಡರ್ ನಾಪತ್ತೆ; ಬೆಂಗಳೂರು ಪ್ರವಾಸಿಗನ ರಕ್ಷಣೆ

ಕುಂದಾಪುರ : ಪ್ರವಾಸಿಗನನ್ನು ಕರೆದೊಯ್ಯತಿದ್ದ ಜೆಟ್‌ಸ್ಕೀ ಬೋಟ್ ಮಗುಚಿ ಬಿದ್ದ ಹಿನ್ನಲೆ ಇಬ್ಬರು ಸಮುದ್ರಕ್ಕೆ ಬಿದ್ದು, ಜೆಟ್ ಸ್ಕೀ ರೈಡರ್ ನಾಪತ್ತೆಯಾದ ಘಟನೆ ಕುಂದಾಪುರದ ತ್ರಾಸಿ ಕಡಲ ಕಿನಾರೆಯಲ್ಲಿ ಸಂಭವಿಸಿದೆ. ಜೆಟ್ ಸ್ಕೀ ರೈಡರ್ ರೋಹಿದಾಸ್ ಅಲಿಯಾಸ್ ರವಿ (45) ನಾಪತ್ತೆಯಾಗಿದ್ದು, ಬೆಂಗಳೂರಿನ ಪ್ರವಾಸಿಗನನ್ನು ರಕ್ಷಿಸಲಾಗಿದೆ.

ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್‌ಸ್ಕೀ ಬೋಟ್‌ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸಲಾಗುತ್ತಿತ್ತು. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್‌ಸ್ಕೀ ಮಗುಚಿ ಬಿದ್ದಿತ್ತು. ರೈಡ್‌ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತನನ್ನು ರಕ್ಷಿಸಲಾಗಿದೆ.

ಬೆಂಗಳೂರು ಮೂಲದ ಪ್ರವಾಸಿಗ ಪ್ರಶಾಂತ್‌ ಎಂಬವರು ಟೂರಿಸ್ಟ್ ಬೋಟಿನಲ್ಲಿ ಬೋಟಿಂಗ್ ನಡೆಸುತ್ತಿರುವಾಗ ಬೋಟ್ ಪಲ್ಟಿ ಆದ ಪರಿಣಾಮ ಪ್ರವಾಸಿಗ ಹಾಗೂ ರೈಡರ್ ಇಬ್ಬರೂ ನೀರಿಗೆ ಬಿದ್ದ ಪರಿಣಾಮ ರೈಡರ್ ನಾಪತ್ತೆಯಾಗಿದ್ದಾರೆ. ಲೈಫ್ ಜಾಕೆಟ್ ಧರಿಸಿದ್ದ ಪರಿಣಾಮ ಪ್ರವಾಸಿಗ ಪ್ರಶಾಂತ್ ಬಚಾವ್ ಆಗಿದ್ದಾರೆ.

ಮುರ್ಡೇಶ್ವರ ನಿವಾಸಿಯಾದ ರೋಹಿದಾಸ್ ತ್ರಾಸಿಯಲ್ಲಿಯೇ ವಾಸಿಸುತ್ತಿದ್ದು, ಜೆಟ್ ಸ್ಕೀ ಮತ್ತಿತರ ಬೋಟ್ ರೈಡ್ ಕಾಯಕ ಮಾಡಿಕೊಂಡಿದ್ದರು.

ನಾಪತ್ತೆಯಾದ ರವಿದಾಸ್ ನ ಶೋಧ ಕಾರ್ಯ ನಡೆಯುತ್ತಿದ್ದು ಗಂಗೊಳ್ಳಿ ಪೊಲೀಸರು ಹಾಗೂ ಕರಾವಳಿ ಪೊಲೀಸ್ ಪಡೆ ಮತ್ತು ಸ್ಥಳೀಯರು ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

ಮಂಗಳೂರು: ಮಂಗಳೂರಿನ ಎ.ಜೆ. ತಾಂತ್ರಿಕ ಕಾಲೇಜಿನಲ್ಲಿ ಅ.8, 9ರಂದು ರಾಷ್ಟ್ರೀಯ ಮಟ್ಟದ ಹ್ಯಾಕಥಾನ್; ₹1 ಲಕ್ಷ ಬಹುಮಾನ

ಬಂಟ್ವಾಳ: ಫಾರಂ ನಂ.7 ದುರುಪಯೋಗ ಆರೋಪ; ಕ್ರಮಕ್ಕೆ ಒತ್ತಾಯಿಸಿ ತಹಶೀಲ್ದಾರ್‌ಗೆ ರಮಾನಾಥ ರೈ ಮನವಿ

ಬಂಟ್ವಾಳ: ಆನೆದೋಡಿಯಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ

error: Content is protected !!