ಜನ ಮನದ ನಾಡಿ ಮಿಡಿತ

Advertisement

ಜೋಗಜಪಲಪಾತ ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ

ಬಂಟ್ವಾಳ: ಜೋಗಜಪಲಪಾತ ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಶಂಭೂರು ಮುಂಡಜೋರ ನಿವಾಸಿ ಭಾರತಿ (55) ಮೃತ ಪಟ್ಟ ಮಹಿಳೆ.ಡಿ.15 ರಂದು ಬಂಟ್ವಾಳ ‌ತಾಲೂಕಿನ ಶಂಭೂರು ಶ್ರೀ ಸಾಯಿ ಮಂದಿರದಿಂದ ಸುಮಾರು 55 ಮಂದಿ ಖಾಸಗಿ ಬಸ್ ನಲ್ಲಿ ಜೋಗಜಲಪಾತಕ್ಕೆ ತೆರಳಿದ್ದರು. ಶಂಭೂರು , ಬಿಸಿರೋಡು,ಪಾಣೆಮಂಗಳೂರು ಹಾಗೂ ಮಂಗಳೂರಿನಿಂದ ಬಸ್ ಮೂಲಕ ಪ್ರವಾಸಕ್ಕೆ ಹೋಗಿದ್ದರು.ಜೋಗ ತಲಪುವ ಸ್ವಲ್ಪ ದೂರವೇ ಬಸ್ ನ ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ಕಳೆದು ಪಕ್ಷಿಯಾಗಿದೆ.ಘಟನೆಯಲ್ಲಿ ಸುಮಾರು 20 ಕ್ಕೂ ಅಧಿಕ ಮಂದಿಗೆ ಗಂಬೀರವಾಗಿ ಗಾಯವಾಗಿತ್ತು. ಇವರೆಲ್ಲರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ವಿಶೇಷ ಮುತುವರ್ಜಿಯಿಂದ ಸಾಗರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆತರಲಾಗಿತ್ತು.
ಶಾಸಕರ ಸೂಚನೆಯಂತೆ ಎ.ಜೆ.ಆಸ್ಪತ್ರೆಯಲ್ಲಿ ಗಂಭೀರ ಗಾಯಗೊಂಡ ಎಲ್ಲರನ್ನು ಚಿಕಿತ್ಸೆ ನೀಡಲು ದಾಖಲು ಮಾಡಲಾಗಿತ್ತು.
ಆದರೆ ಕೈ ಹಾಗೂ ಎದೆ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಭಾರತಿ ಅವರು ಸುಮಾರು 15 ದಿನಗಳ ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಭಾರತಿ ಅವರ ಮಗಳು ಕೂಡ ಅಪಘಾತದಲ್ಲಿ ಗಾಯಗೊಂಡಿದ್ದು, ಮಂಗಳೂರು ಎಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!