ಜನ ಮನದ ನಾಡಿ ಮಿಡಿತ

Advertisement

ಉಚ್ಚಿಲ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ರಸ್ತೆ ದಾಟುತ್ತಿದ್ದ ವೃದ್ಧ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಚ್ಚಿಲದಲ್ಲಿ ನಡೆದಿದೆ.

 


ಮೃತ ವ್ಯಕ್ತಿಯನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72)ಎಂದು ಗುರುತಿಸಲಾಗಿದೆ.ಶುಕ್ರವಾರ ಬೆಳಗ್ಗೆ ಉಚ್ಚಿಲ ಪೇಟೆಯ ರಿಕ್ಷಾ ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಶ್ರೀನಿವಾಸ ತೋಣಿತ್ತಾಯರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.ಈ ವೇಳೆ ಸ್ಥಳೀಯ ಯುವಕರ ತಂಡ ಮೃತದೇಹವನ್ನು ಉಚ್ಚಿಲ ಎಸ್ ಡಿಪಿ ಐ ಅಂಬುಲೆನ್ಸ್‌ನಲ್ಲಿ ಪಡುಬಿದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸುವಲ್ಲಿ ಸಹಕರಿಸಿತು.ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!