ಜನ ಮನದ ನಾಡಿ ಮಿಡಿತ

Advertisement

ಕೋಟೆಕಾರು ಕೆ.ಸಿ.ರೋಡ್ ಶಾಖಾ ಬ್ಯಾಂಕ್ ನಿಂದ ಭಾರೀ ದರೋಡೆ; ಚಿನ್ನ ಹಣ ದೋಚಿದ ಆರು ಮಂದಿ ದರೋಡೆಕೋರರು

ಉಳ್ಳಾಲ: ಕಾರೊಂದರಲ್ಲಿ ಬಂದ ಆರು ಮಂದಿ ಆಗಂತುಕರ ತಂಡ ಉಳ್ಳಾಲ ತಾಲೂಕು ಕೆ.ಸಿ.ರೋಡ್ ಎಂಬಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನಿಂದ 15 ಕೋಟಿ ರೂ.ಗೂ ಮಿಕ್ಕಿದ ಚಿನ್ನ ಹಾಗೂ ಐದಯ ಲಕ್ಷ ದಷ್ಟು ನಗದನ್ನು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ದರೋಡೆ ನಡೆಸಿ ಪರಾರಿಯಾದ ಘಟನೆ ಹಾಡಹಗಲೇ ನಡೆದಿದೆ.

 


ಸ್ಥಳಕ್ಕೆ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಭೇಟಿ ನೀಡಿ ಶೀಘ್ರವೇ ದರೋಡೆಕೋರರನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶಿಸಿದ್ದಾರೆ.

ಬ್ಯಾಂಕಿನಲ್ಲಿದ್ದ ಮೂವರು ಮಹಿಳಾ ಸಿಬ್ಬಂದಿ ಹಾಗೂ ಓರ್ವ ಪುರುಷ ಸಿಬ್ಬಂದಿ ಮತ್ತೋರ್ವ ಸಿಸಿಟಿವಿ ಟೆಕ್ನೀಷಿಯನ್ ಅವರಿಗೆ ಬಂದೂಕು ಹಾಗೂ ತಲವಾರು ತೋರಿಸಿದ ಮಾಸ್ಕ್ ಧರಿಸಿದ್ದ ಐವರ ತಂಡ ಸುಮ್ಮನಿರುವಂತೆ ಬೆದರಿಸಿ, ಇಲ್ಲವಾದಲ್ಲಿ ಕೊಲ್ಲುವ ಬೆದರಿಕೆಯನ್ನು ಒಡ್ಡಿ ಲಾಕರ್ ನಲ್ಲಿದ್ದ 15 ಕೋಟಿ ರೂ. ಚಿನ್ನ ಹಾಗೂ 5 ಲಕ್ಷ ರೂ ನಷ್ಟು ನಗದು ದೋಚಿ ಗ್ರೇ ಬಣ್ಣದ ಫಿಯೇಟ್ ಕಾರಿನಲ್ಲಿ ಪರಾರಿಯಾಗಿದ್ದಾರೆ. ಸದಾ ಜನಜಂಗುಳಿಯಿಂದ ಕೂಡಿರುವ ಕೆ.ಸಿ ರೋಡ್ ಜಂಕ್ಷನ್ ಶುಕ್ರವಾರ ವಾದ ಹಿನ್ನೆಲೆಯಲ್ಲಿ ಹೆಚ್ಚು ಜನರಿರಲಿಲ್ಲ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!