ಜನ ಮನದ ನಾಡಿ ಮಿಡಿತ

Advertisement

ತೋಕೂರು ಶ್ರೀ ಸುಬ್ರಹ್ಮಣ್ಯ ದೇವಲದಲ್ಲಿ ‘ಯಕ್ಷಾರ್ಚನೆ’

ಹಳೆಯಂಗಡಿ: ಯಕ್ಷನಾಟ್ಯ ದಿಂದಲೂ ದೇವರ ಸೇವೆ ಮಾಡಿದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಯಕ್ಷಗಾನ ಸಹಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಡಿಸಿಕೊಂಡರೆ ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ ಸಾಧ್ಯ ಎಂದು ಕಟೀಲು ಕ್ಷೇತ್ರದ ಅರ್ಚಕ ಶ್ರೀ ಹರಿ ನಾರಾಯಣ ಆಸ್ರಣ್ಣ ಹೇಳಿದರು.


ಅವರು ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಕ್ಷಾರ್ಚನೆ ಕಾರ್ಯಕ್ರಮದ ದೀಪ ಪ್ರಜ್ವಲನಗೊಳಿಸಿ ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಯಕ್ಷಗಾನ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ,ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವ್ಥಾಪನಾ ಸಮಿತಿಯ ಅಧ್ಯಕ್ಷ, ಹರಿದಾಸ್ ಭಟ್, ಸದಾಶಿವ ಡಿ ಶೆಟ್ಟಿಗಾರ್, ಸೀತಾ ಪೂಜಾರಿ,ಅಂಬಿಕಾ ಕಿರಣ್ ಸಿದ್ದು ಪೂಜಾರಿ ದುಬೈ , ಭಾಸ್ಕರ್ ಅಮೀನ್ ತೋಕೂರು,ಗಣೇಶ್ ಪೂಜಾರಿ ಬೆಂಗಳೂರು, ಮತ್ತಿತರರು ಉಪಸ್ಥಿತರಿದ್ದರು. ನವೀನ್ ಶೆಟ್ಟಿ ಎಡ್ಮೇಮಾರ್ ನಿರೂಪಿಸಿದರು.
ಯಕ್ಷಾರ್ಚನೆಯ ಬಾಲ ಪ್ರತಿಭೆಗಳಾದ ದಿಯಾ, ದಿಶಾ ಮತ್ತು ದೃಶಾನ್ ರವರನ್ನು ಗೌರವಿಸಲಾಯಿತು. ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಯ ನಾಟ್ಯಭ್ಯಾಸ ಗುರುಗಳಾದ ಯಕ್ಷಮಯೂರ ಶೇಖರ್ ಡಿ ಶೆಟ್ಟಿಗಾರ್ ಮತ್ತು ನಾಟ್ಯಗುರು ಶರತ್ ಕುಡ್ಲ ಶುಭ ಹಾರೈಸಿದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!