ಜನ ಮನದ ನಾಡಿ ಮಿಡಿತ

Advertisement

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಬ್ಬರಿಗೆ ಥಳಿತ

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಬ್ಬರಿಗೆ ಥಳಿತ

ಉಡುಪಿ : ಉಡುಪಿ ನಗರದ ಸಿಟಿ ಸೆಂಟರ್‌ನ ಸಿಬ್ಬಂದಿಗಳು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಬ್ಬರನ್ನು ಥಳಿಸಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳು ನಿಹಾಲ್ ಹಾಗೂ ಪೈಝಲ್ ಎಂದು ತಿಳಿದುಬಂದಿದೆ.

ಈ ಇಬ್ಬರು ವಿದ್ಯಾರ್ಥಿಗಳು ಕ್ಲಾಸ್ ಮುಗಿಸಿ, ಉಡುಪಿ ನಗರದಲ್ಲಿರುವ ಸಿಟಿ ಸೆಂಟರ್‌ಗೆ ಹೋಗಿದ್ದರು. ಅಲ್ಲಿ ಮೂರನೇ ಮಹಡಿಯಿಂದ ಕೆಳಗೆ ಬರುವಾಗ ಲಿಫ್ಟ್ ಕೆಟ್ಟು ಹೋಗಿದ್ದರಿಂದ ಆಟೋಮ್ಯಾಟಿಕ್ ಎಕ್ಸಲೆಟರ್ ಮೇಲೆ ನಡೆದುಕೊಂಡು ಕೆಳಗೆ ಬರುತ್ತಿದ್ದಾಗ ಸಿಟಿ ಸೆಂಟರ್ ನ ಇಬ್ಬರು ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ತಡೆದು ನಿಲ್ಲಿಸಿ ಎಕ್ಸಲೇಟರ್ ಮೇಲೆ ಏಕೆ ಬಂದಿದ್ದು ಅಂತ ತಗಾದೆ ತೆಗೆದು ವಿದ್ಯಾರ್ಥಿಗಳಿಗೆ ಮನಸೊ ಇಚ್ಛೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ನಿಹಾಲ್ ತುಟಿ ಒಡೆದು ಗಾಯವಾಗಿದೆ.ಪೈಝಲ್ ಎಂಬಾತನ ಹೊಟ್ಟೆ, ಬೆನ್ನು ಭಾಗಕ್ಕೆ ಕೈಯಿಂದ ಗುದ್ದಿ ಹಲ್ಲೆ ಮಾಡಿರುತ್ತಾರೆ. ತಕ್ಷಣ ಸ್ಥಳೀಯರು ವಿದ್ಯಾರ್ಥಿಗಳನ್ನು ಸಿಬ್ಬಂದಿಯ ಕೈಯಿಂದ ಪಾರು ಮಾಡಿ, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಈ ಘಟನೆಯಿಂದ ಆಘಾತಕ್ಕೊಳಗಾದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!