ಜನ ಮನದ ನಾಡಿ ಮಿಡಿತ

Advertisement

ಬಿಜೆಪಿ ವತಿಯಿಂದ ದೇಶಾದ್ಯಂತ ವಾಜಪೇಯಿಯವರು ಜೀವಿತಾವಧಿಯಲ್ಲಿ ಭೇಟಿ ಮಾಡಿದ್ದ ಬಿಜೆಪಿಯ ಹಿರಿಯರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ

ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ಬಿಜೆಪಿ ವತಿಯಿಂದ ದೇಶಾದ್ಯಂತ ವಾಜಪೇಯಿಯವರು ಜೀವಿತಾವಧಿಯಲ್ಲಿ ಭೇಟಿ ಮಾಡಿದ್ದ ಬಿಜೆಪಿಯ ಹಿರಿಯರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ ನಡೆಯುತ್ತಿದ್ದು, ಮಂಗಳೂರು ನಗರ ದಕ್ಷಿಣ ಬಿಜೆಪಿ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬೋಳೂರು ವಾರ್ಡ್ ನಿವಾಸಿಯಾದ ಶ್ರೀ ಅಮೃತ್ ಬೋಳೂರು ರವರನ್ನು ಸನ್ಮಾನಿಸಲಾಯಿತು.

ನಂತರ ಮಾತನಾಡಿದ ಶಾಸಕರು, ಜನಸಂಘದ ಕಾಲದಿಂದಲೂ ಬಿಜೆಪಿಯೊಂದಿಗೆ ಇವರ ಕುಟುಂಬ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದು ವಾಜಪೇಯಿ‌ ಯಂತಹ ದೇಶ ಕಂಡ ಮಹಾನ್ ನಾಯಕ ಇವರ ಮನೆಗೆ ಭೇಟಿ ನೀಡಿದ್ದರು. ಇಂತಹ ಹಿರಿಯರನ್ನು ಭೇಟಿ ಮಾಡುವುದು, ಗೌರವಿಸುವುದು ನಮ್ಮ ಪಾಲಿನ ಸೌಭಾಗ್ಯ ಎಂದರು.

ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಪ್ರೇಮಾನಂದ ಶೆಟ್ಟಿ, ಯತೀಶ್ ಅರ್ವರ್, ಪೂರ್ಣಿಮಾ, ಶಕೀಲಾ ಕಾವಾ, ಸತೀಶ್ ಪ್ರಭು, ಅಶ್ವಿತ್ ಕೊಟ್ಟಾರಿ, ಗೌತಮ್ ಕೋಡಿಕಲ್, ಪೂರ್ಣಿಮಾ ರಾವ್, ರವಿಶಂಕರ್ ಮಿಜಾರ್, ಭಾಸ್ಕರ ಚಂದ್ರ ಶೆಟ್ಟಿ, ನಿತಿನ್ ಕುಮಾರ್, ರಾಜಗೋಪಾಲ್ ರೈ, ನಾರಾಯಣ ಗಟ್ಟಿ, ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!