ಬಂಟ್ವಾಳ: ಕಳೆದ 10ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಪತ್ತೆಯಾಗಿದ್ದು, ಪೊಲೀಸರು ಕರೆ ತರುತ್ತಿದ್ದಾರೆ ಎನ್ನಲಾಗಿದೆ.

ಫೆ. ೨೫ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್ ಬಳಿಕ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು, ಮೊಬೈಲ್ ಪತ್ತೆಯಾಗಿ ಸಾಕಷ್ಟು ಅನುಮಾನಗಳು ಸೃಷ್ಟಿಯಾಗಿತ್ತು. ಫರಂಗಿಪೇಟೆಯಲ್ಲಿ ಪ್ರತಿಭಟನೆ ನಡೆದು ಪೊಲೀಸರು ತನಿಖೆ ಸರಿಯಾಗಿಲ್ಲ ಎಂಬ ಆರೋಪ ಕೇಳಿ ಬಂದಿತ್ತು.
ಆದರೆ ಇದೀಗ ಆತ ಕರಾವಳಿ ಭಾಗದಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದ್ದು, ಸಂಪೂರ್ಣ ವಿವರ ಲಭ್ಯವಾಗಿಲ್ಲ.



