ಜನ ಮನದ ನಾಡಿ ಮಿಡಿತ

Advertisement

ಶ್ರೀ ನಡಿಯೇಲು ದೈಯ್ಯ೦ಗುಲು, ಶ್ರೀ ಉಳ್ಳಾಲ್ತಿ, ಶ್ರೀ ನಾಲ್ಕೆತ್ತಾಯ ಹಾಗೂ ಪರಿವಾರ ದೈವಗಳ ಕ್ಷೇತ್ರ ಮಿತ್ತಮಜಲಿನಲ್ಲಿ ಏ. 2, 3 ರಂದು ನವೀಕೃತ ಗೋಪುರಗಳ ಲೋಕಾರ್ಪಣೆ ಹಾಗೂ ಸಾನಿಧ್ಯ ಕಲಶಾಧಿ ಕಾರ್ಯಕ್ರಮಗಳು

ಬಂಟ್ವಾಳ; ಶ್ರೀ ನಡಿಯೇಲು ದೈಯ್ಯ೦ಗುಲು, ಶ್ರೀ ಉಳ್ಳಾಲ್ತಿ, ಶ್ರೀ ನಾಲ್ಕೆತ್ತಾಯ ಹಾಗೂ ಪರಿವಾರ ದೈವಗಳ ಕ್ಷೇತ್ರ ಮಿತ್ತಮಜಲಿನಲ್ಲಿ ಏಪ್ರಿಲ್ 2ಮತ್ತು 3 ರಂದು ನವೀಕೃತ ಗೋಪುರಗಳ ಲೋಕಾರ್ಪಣೆ ಹಾಗೂ ಸಾನಿಧ್ಯ ಕಲಶಾಧಿ ಕಾರ್ಯಕ್ರಮಗಳು ನಡೆಯಲಿದೆ

 

ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಕಾರಣಿಕದ ಕ್ಷೇತ್ರ ಶ್ರೀ ನಡಿಯೇಲು ದೈಯ್ಯ೦ಗುಲು, ಶ್ರೀ ಉಳ್ಳಾಲ್ತಿ, ಶ್ರೀ ನಾಲ್ಕೈತ್ತಾಯ ಹಾಗೂ ಪರಿವಾರ ದೈವಗಳ ಕ್ಷೇತ್ರ ಮಿತ್ತಮಜಲಿನಲ್ಲಿ ಎಪ್ರಿಲ್ 2 ಮತ್ತು 3 ರಂದು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವೀಕೃತ ಗೋಪುರಗಳ ಲೋಕಾರ್ಪಣೆ ಹಾಗೂ ಸಾನಿಧ್ಯ ಕಲಶಾಧಿ ಕಾರ್ಯಕ್ರಮಗಳು ನಡೆಯಲಿದೆ.

02.04.2025ನೇ ಬುಧವಾರ ಸಂಜೆ 4.30ಕ್ಕೆ ಮಿತ್ತಮಜಲು ದ್ವಾರದಿಂದ ಶ್ರೀ ಕ್ಷೇತ್ರಕ್ಕೆ ಹಸಿರುವಾಣಿ ಹೊರೆಕಾಣಿಕೆ ಶೋಭಾಯಾತ್ರೆ ನಡೆಯಲಿದೆ. ಸಂಜೆ ಘಂಟೆ 5.30ರಿಂದ ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕರಾದ ಅಜಯ್ ವಾರಿಯರ್ ಬೆಂಗಳೂರು ಮತ್ತು ಖ್ಯಾತ ಸಂಗೀತ ನಿರ್ದೇಶಕರಾದ
ಶ್ರೀ ಗುರುಕಿರಣ್ ಇವರ ಉಪಸ್ಥಿತಿಯಲ್ಲಿ ಭಕ್ತಿ ಗಾನ ಸಂಭ್ರಮ ನಡೆಯಲಿದೆ.

ಇನ್ನು‌‌ ಕಾರ್ಯಕ್ರಮದ ಪೂರ್ವ ಸಿದ್ಧತೆಯ ಸಲುವಾಗಿ ಸಜೀಪ ಮೂಡದ ಬೇಂಕ್ಯದಲ್ಲಿ ಸಭೆಯನ್ನುನಡೆಸಲಾಯಿತು. ಈ ಸಮಯದಲ್ಲಿ ಸಜೀಪಮೂಡದ ಹಲವು ಸಂಘ ಸಂಸ್ಥೆಗಳಿಗೆ ಜವಬ್ದಾರಿಗಳನ್ನು ನೀಡಲಾಯಿತು. ಇನ್ನು ಈ ಸಮಯದಲ್ಲಿ ಜಯಶಂಕರ ಬಾಸ್ರಿತ್ತಾಯ, ಮಾಗಣೆ ತಂತ್ರಿಗಳಾದ ಎಮ್ ಸುಬ್ರಹ್ಮಣ್ಯ ಭಟ್ , ಶ್ರೀಕಾಂತ್ ಶೆಟ್ಟಿ ಸಂಕೇಶ, ಗಿರೀಶ್ ಕುಮಾರ್ ಪೆರ್ವ, ಕಿಶೋರ್ ಅಗರಿ, ಪುಷ್ಪ ರಮೇಶ್ ಪೆರ್ವ
ಜಯರಾಮ‌ ಪೆರ್ವ, ಶ್ರೀ ದೇವಿಪ್ರಸಾದ್ ಪೂಂಜ, ಶಿವಪ್ರಸಾದ್ ಶೆಟ್ಟಿ ಹಾಗೂ ಚಂದ್ರಹಾಸ್ ಪೂಜಾರಿ ,ಪ್ರಹ್ಲಾದ್ ಬೇಂಕ್ಯ ಹಾಗೂ ಸರ್ವ ಸದಸ್ಯರೂ ಉಪಸ್ಥಿತರಿದ್ದರು

 

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!