ಜನ ಮನದ ನಾಡಿ ಮಿಡಿತ

Advertisement

ಜೈಲಿನಲ್ಲಿ ಆರೋಪಿ ನೇಣು ಬಿಗಿದು ಆತ್ಮಹತ್ಯೆ

ಜೈಲಿನಲ್ಲಿ ಆರೋಪಿ ನೇಣು ಬಿಗಿದು ಆತ್ಮಹತ್ಯೆ

ಮೂಡಬಿದ್ರಿ : ಕಳೆದ ಕೆಲವು ದಿನಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅರೆಸ್ಟ್ ಆಗಿ ಜೈಲಿನಲ್ಲಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಮೂಡುಬಿದಿರೆ ಲಾಡಿಯ ಪ್ರಕಾಶ್ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡ ಆರೋಪಿಯಾಗಿದ್ದಾನೆ. ಪಕ್ಕದ ಮನೆಯ ಹದಿಮೂರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಲಾಡಿ ಅಜಂಕಲ್ಲು ನಿವಾಸಿ ಪ್ರಕಾಶ್ ಎಂಬವರನ್ನು ಮೂಡುಬಿದಿರೆ ಇನ್ ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ನೇತೃತ್ವದ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಜೈಲಿನ ಬಿ ಬ್ಯಾರಕಿನ ಶೌಚಾಲಯದ ಕಿಟಕಿಯ ಸರಳುಗಳಿಗೆ ಆರೋಪಿ ಮುಂಜಾನೆ ಶಾಲಿನಿಂದ ನೇಣುಬಿಗಿದುಕೊಂಡಿದ್ದನ್ನು ಜೈಲಿನ ಭದ್ರತಾ ಸಿಬ್ಬಂದಿ ಗಮನಿಸಿದರು. ಆತನನ್ನು ತಕ್ಷಣವೇ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಜೈಲಿನ ವಾಹನದಲ್ಲಿ ಕರೆದೊಯ್ದಿದ್ದಾರೆ. ಆತ ಅಸುನೀಗಿರುವುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಆರೋಪಿ ಪ್ರಕಾಶ್ ವಿಪರೀತ ಕುಡಿತದ ಚಟ ಹೊಂದಿದ್ದ. ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾದ ಆತನಿಗೆ ಈ ಪ್ರಕರಣದಲ್ಲಿ ಜಾಮೀನು ಸಿಕ್ಕಿರಲಿಲ್ಲ. ಜೈಲಿನಿಂದ ತನ್ನನ್ನು ಬಿಡಿಸುವುದಕ್ಕೆ ಕುಟುಂಬಸ್ಥರು ಯಾರೂ ಬರುವುದಿಲ್ಲ ಎಂಬ ಕಾರಣಕ್ಕೆ ನೊಂದಿದ್ದ ಎಂದು ಜೈಲಿನ ಮೂಲಗಳು ತಿಳಿಸಿವೆ. ಆತ್ಮಹತ್ಯೆ ಕುರಿತು ಬರ್ಕೆ ಪೋಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!