ಮೀನು ಕದ್ದ ಆರೋಪದಡಿಯಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಕೃಷ್ಣನಗರಿ ಉಡುಪಿಯಲ್ಲಿ ನಡೆದಿದೆ.

ಉಡುಪಿಯ ಮಲ್ಪೆ ಮೀನುಗಾರಿಕ ಬಂದರಿನಲ್ಲಿ ಕೇವಲ ಮೀನು ಕದ್ದ ಆರೋಪದ ಹಿನ್ನಲೆ, ಮಹಿಳೆಯ ಕಪಾಳಕ್ಕೆ ಬಾರಿಸಿ ಅಮಾನವೀಯವಾಗಿ ವರ್ತಿಸಿದ್ದಾರೆ. ಬಳಿಕ ಮರಕ್ಕೆ ಕಟ್ಟಿ ಹಾಕಿ ಹಲ್ಲೆಯನ್ನು ನಡೆಸಿದ್ದು, ಘಟನೆ ವೇಳೆ ನೂರಾರು ಸಂಖ್ಯೆಯಲ್ಲಿ ಜನ ಸೇರಿದ್ದರು.
ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.



