ಜನ ಮನದ ನಾಡಿ ಮಿಡಿತ

Advertisement

ಪ್ರಾಮಾಣಿಕತೆ ಮೆರೆದ ಪತ್ರಿಕಾ ವಿತರಕ

ಮಂಗಳೂರು: ವೃತ್ತಪತ್ರಿಕೆ ವಿತರಕರೊಬ್ಬರು ದುಬಾರಿ ಮೊಬೈಲ್ ಫೋನ್ ಅನ್ನು ಅದರ ಮಾಲಕರಿಗೆ ಹಿಂದಿರುಗಿಸಿದ್ದಾರೆ. ಅವರ ಈ ಪ್ರಾಮಾಣಿಕತೆಯ ಕಾರ್ಯವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

 


ಸಂತ ಅಲೋಶಿಯಸ್ ಡೀಮ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಜೋಯಲ್ ಅವರು, ಸುಮಾರು ೧.೨೫ ಲಕ್ಷ ರೂಪಾಯಿ ಮೌಲ್ಯದ ತನ್ನ ಐಫೋನ್ ಕಳೆದುಕೊಂಡಿದ್ದರು. ಅವರ ಈ ಫೋನ್ ಮಂಗಳೂರಿನ ರೇಣುಕಾರಾಜ್ ನ್ಯೂಸ್ ಏಜೆನ್ಸಿಯಲ್ಲಿ ಕೆಲಸ ಮಾಡುವ ವೃತ್ತಪತ್ರಿಕೆ ವಿತರಕ ರಮೇಶ್ ಅವರಿಗೆ ಸಿಕ್ಕಿತ್ತು.
ಆದರೆ ರಮೇಶ್ ಅವರು ಈ ಫೋನ್ ಇಟ್ಟುಕೊಳ್ಳದೇ ಸಾಮಾಜಿಕ ಮಾಧ್ಯಮದಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಇದರಿಂದಾಗಿ ಫೋನ್‌ನ ನಿಜವಾದ ಮಾಲಕರನ್ನು ಪತ್ತೆಹಚ್ಚಲು ಸಹಾಯವಾಯಿತು. ಈ ಫೋನ್ ಅನ್ನು ಜೋಯಲ್ ಅವರದ್ದೇ ಎಂದು ಖಚಿತಪಡಿಸಿಕೊಂಡ ರಮೇಶ್ ಅವರು ತಕ್ಷಣವೇ ಅವರಿಗೆ ಹಸ್ತಾಂತರಿಸಿದ್ದಾರೆ. ರಮೇಶ್ ಅವರು ಪ್ರಾಮಾಣಿಕತೆಗಾಗಿ ಸಾರ್ವಜನಿಕರಿಂದ ಮೆಚ್ಚುಗೆ ಗಳಿಸಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!