ಜನ ಮನದ ನಾಡಿ ಮಿಡಿತ

Advertisement

ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿದ ಕೃತ್ಯವನ್ನು ಸಮರ್ಥಿಸಿದ ಪ್ರಮೋದ್‌ ಮಧ್ವರಾಜ್ ರನ್ನು ತಕ್ಷಣ ಬಂಧಿಸಿ: ಬಂಜಾರ ಸಮಾಜ ಒತ್ತಾಯ

ಉಡುಪಿ: ಮಲ್ಪೆಯಲ್ಲಿ ಮೀನು ಕದ್ದ ಆರೋಪದಲ್ಲಿ ಪರಿಶಿಷ್ಟ ಜಾತಿಯ ಬಂಜಾರ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿದ ಹೀನಾಯ ಕೃತ್ಯವನ್ನು ಸಮರ್ಥಿಸಿದ ಹಾಗೂ ಆಕೆಯನ್ನು ಕಳ್ಳಿಯೆಂದು ನಿಂದಿಸಿ, ಪ್ರಚೋದನಕಾರಿ ಭಾಷಣ ಮಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್‌ರನ್ನು ಕೂಡಲೇ ಬಂಧಿಸಬೇಕು ಮತ್ತು ಕೃತ್ಯ ಎಸಗಿದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗದ ಕರ್ನಾಟಕ ರಾಜ್ಯ ಬಂಜಾರ ಯುವಕರ ಹಾಗೂ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್ ಆರ್.ಡಿ. ಒತ್ತಾಯಿಸಿದ್ದಾರೆ.


ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲ್ಪೆ ಮೀನುಗಾರರ ಸಂಘ ಆಯೋಜಿಸಿದ ಸಭೆಯಲ್ಲಿ ದಲಿತ ಮಹಿಳೆಯ ಮೇಲೆ ನಡೆದ ಹಲ್ಲೆ ಕೃತ್ಯವನ್ನು ಸಮರ್ಥಿಸಿದ ಮಾಜಿ ಸಚಿವರಾದ ಕೆ.ರಘುಪತಿ ಭಟ್ ಹಾಗೂ ಪ್ರಮೋದ್ ಮಧ್ವರಾಜ್ ಬೇಷರತ್ ಆಗಿ ಕ್ಷಮೆ ಯಾಚಿಸಬೇಕು ಎಂದರು.
ಪರಿಶಿಷ್ಟ ಜಾತಿ ಬಂಜಾರ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಮೀನು ಕದ್ದ ಆರೋಪದಲ್ಲಿ ಸಾರ್ವಜನಿಕವಾಗಿ ಮರಕ್ಕೆ ಕಟ್ಟಿ ಹಾಕಿ ಥಳಿಸಿರುವುದನ್ನು ಸಮುದಾಯ ಉಗ್ರವಾಗಿ ಖಂಡಿಸುತ್ತದೆ. ಈ ಕೃತ್ಯ ಸಮಸ್ತ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆಯಾಗಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದರು.
ಮಾ.18ರಂದು ಮಲ್ಪೆ ಬಂದರು ಪ್ರದೇಶದಲ್ಲಿ ನಡೆದ ಘಟನೆಯಲ್ಲಿ ಬಂಜಾರ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಒಂದೆರಡು ಕೆ.ಜಿ. ಮೀನು ತೆಗೆದ ಕಾರಣಕ್ಕಾಗಿ ಕಟ್ಟಿ ಹಾಕಿ ಥಳಿಸಿರುವುದು, ಹೀನಾಮಾನವಾಗಿ ನಿಂದಿಸಿರುವುದು ನಾಗರಿಕ ಸಮಾಜಕ್ಕೆ ಕಳಂಕ. ಇದರಿಂದ ಮಹಿಳೆಗೆ ಅವಮಾನವಾಗಿದೆ. ಆಕೆಯ ಸ್ವಾಭಿಮಾನಕ್ಕೆ, ಆತ್ಮಾಭಿಮಾನಕ್ಕೆ ಧಕ್ಕೆಯಾಗಿದೆ. ಈ ಘಟನೆಯಲ್ಲಿ ಮಹಿಳೆಯ ರಕ್ಷಣೆಗೆ ನಿಲ್ಲಬೇಕಿದ್ದ ಮಾಜಿ ಶಾಸಕರು, ಸಚಿವರು, ಹೊಟ್ಟೆಪಾಡಿಗಾಗಿ ಒಂದೆರಡು ಕೆ.ಜಿ.ಮೀನು ತೆಗೆದ ಮಹಿಳೆಯನ್ನು ರಾಜಕೀಯ ಕಾರಣಗಳಿಗಾಗಿ ದೂಷಿಸಿ, ಆಕೆಯನ್ನು ಕಳ್ಳಿಯೆಂದು ಘೋಷಿಸಿ ಅಪಮಾನಿಸಿದ್ದಾರೆ ಎಂದು ಅವರು ದೂರಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!