ಜನ ಮನದ ನಾಡಿ ಮಿಡಿತ

Advertisement

ಮಲ್ಪೆ ಮರಕ್ಕೆ ಕಟ್ಟಿ ದಲಿತ ಮಹಿಳೆಗೆ ಹಲ್ಲೆ: ಪ್ರಕರಣ ವಾಪಾಸ್ಸು ಪಡೆಯುವಂತೆ ಸಂತ್ರಸ್ತೆಯಿಂದ ಡಿಸಿಗೆ ಮನವಿ

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದಘಟನೆಗೆ ಸಂಬಂಧಿಸಿ ಆರೋಪಿಗಳ ವಿರುದ್ಧ ದಾಖಲಿಸಲಾದ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಂತ್ರಸ್ತೆ ಲಕ್ಕವ್ವ ಬಾಯಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.


ಸಮುದಾಯದವರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು, ಹಲವು ವರ್ಷಗಳಿಂದ ವಿವಿಧ ಜಿಲ್ಲೆಗಳಿಂದ ಉದ್ಯೋಗ ಅರಸಿಕೊಂಡು ಉಡುಪಿಗೆ ಬಂದು ಮಲ್ಪೆ ಮೀನುಗಾರರ ಸಂಘದ ಸಹಕಾರದಿಂದ ಮಲ್ಪೆ ಬಂದರಿನಲ್ಲಿ ಕೆಲಸ ಮಾಡಿಕೊಂಡಿದ್ದೇವೆ. ಇತ್ತೀಚೆಗೆ ಆಕಸ್ಮಿಕವಾಗಿ ನಡೆದ ಘಟನೆಯನ್ನು ಮಲ್ಪೆ ಪೊಲೀಸ್ ಠಾಣೆಯಲ್ಲಿ ಸೌಹಾರ್ದಯುತವಾಗಿ ಇತ್ಯರ್ಥ ಮಾಡಿಕೊಳ್ಳಲಾಗಿದೆ. ಆದರೂ ಮುಗ್ದ ಮೀನುಗಾರರ ಮೇಲೆ ಕೇಸುಗಳನ್ನು ಹಾಕಿ ಬಂಧಿಸಿರುವುದು ಸರಿಯಲ್ಲ ಎಂದು ಮನವಿಯಲ್ಲಿ ಅವರು ತಿಳಿಸಿದ್ದಾರೆ.
ಮೀನುಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆದು ಸಾವಿರಾರು ಮಂದಿ ಉದ್ಯೋಗ ಅರಸಿ ಬಂದ ನಮ್ಮಂತಹ ಬಡ ಕಾರ್ಮಿಕರಿಗೆ ಸೌಹಾರ್ದಯುತ ರೀತಿಯಲ್ಲಿ ಕೆಲಸ ಮಾಡಿ ಉತ್ತಮ ಜೀವನ ನಡೆಸಲು ಅವಕಾಶ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಬಂಜಾರ ಸಮುದಾಯದ ರಾಷ್ಟ್ರೀಯ ಸಂಘಟನೆ ಕಾರ್ಯದರ್ಶಿ ಜಯಸಿಂಹ, ಬಂಜಾರ ಸಮುದಾಯದ ಸ್ಥಳೀಯ ಮುಖಂಡ ಮಂಜುನಾಥ ಚೌಹಾಣ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!