ಜನ ಮನದ ನಾಡಿ ಮಿಡಿತ

Advertisement

ಜ್ಞಾನದ ಜ್ವಾಲೆಯು ಅಜ್ಞಾನದ ಕತ್ತಲೆಯನ್ನ ದೂರ ಮಾಡಿ ವಿದ್ಯೆಯ ಮೂಲಕ ಸುಜ್ಞಾನವನ್ನು ಮೂಡಿಸುತ್ತದೆ.- ಹರಿಕೃಷ್ಣ ಪುನರೂರು

ಮುಲ್ಕಿ: ಜ್ಞಾನದ ಜ್ವಾಲೆಯು ಅಜ್ಞಾನದ ಕತ್ತಲೆಯನ್ನ ದೂರ ಮಾಡಿ ವಿದ್ಯೆಯ ಮೂಲಕ ಸುಜ್ಞಾನವನ್ನು ಮೂಡಿಸುತ್ತದೆ. ದೀಪದಿಂದ ಹೊರಹೊಮ್ಮುವ ಬೆಳಕಿನ ಕಿರಣಗಳು ಹಲವಾರು ವಿದ್ಯಾರ್ಥಿಗಳ ಬದುಕನ್ನು ರೂಪಿಸಲು ದಾರಿಯನ್ನು ಸೂಚಿಸುವ ಸಂಕೇತವಾಗಿದೆ, ಆದ್ದರಿಂದ ನಮ್ಮ ಶಾಲೆಯ ಧ್ಯೇಯವಾಕ್ಯ, – “ತಮಸೋಮಾ ಜ್ಯೋತಿರ್ಗಮಯ” ಎಂದು ಶ್ರೀ ಶಾರದಾ ಸೊಸೈಟಿಯ ಅಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು.
ಇವರು ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲೆಯಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಆಡಳಿತ ಮಂಡಳಿ ನಡೆಸಿದ್ದು ಅದರ ಭಾಗವಾಗಿ, ವಿನೂತನ ಶಾಲಾ ಲಾಂಛನವನ್ನು ಬಿಡುಗಡೆ ಮಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಶ್ರೀ ಶಾರದಾ ಸೊಸೈಟಿಯ ಕಾರ್ಯದರ್ಶಿ ಪುರಂದರ ಶೆಟ್ಟಿಗಾರ್, ಕೋಶಾಧಿಕಾರಿ ಭುವನಾಭಿರಾಮ ಉಡುಪ, ನಿರ್ದೇಶಕರುಗಳಾದ ಪಟೇಲ್ ವಾಸುದೇವ ರಾವ್, ಪಿ.ಎಸ್. ಸುರೇಶ್ ರಾವ್, ಪಟೇಲ್ ವಿಶ್ವನಾಥ್ ರಾವ್ ಉಪಸ್ಥಿತರಿದ್ದರು.
ಶಾಲಾ ಸಂಚಾಲಕ ದೇವಪ್ರಸಾದ್ ಪುನರೂರು ಸ್ವಾಗತಿಸಿದರು, ಶಾಲಾ ಪ್ರಾಂಶುಪಾಲ ಜಿತೇಂದ್ರ ವಿ ರಾವ್ ವಂದಿಸಿದರು, ಸಹ ಶಿಕ್ಷಕಿ ದೀಪಿಕಾ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ವಾಷಿಂಗ್ಟನ್: ಹಾರ್ಮುಜ್ ದಾಳಿಗೆ ಭಾರತದ ಖಂಡನೆ; ವಿಶ್ವಸಂಸ್ಥೆಯಲ್ಲಿ ಶಾಂತಿಗೆ ಕರೆ

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

error: Content is protected !!