ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಮಿಕ್ಸ್ಚರ್ ಹಾಗೂ ಜಿಲೇಬಿ ತಯಾರಿಕೆಯಲ್ಲಿ ಬಳಕೆ ಮಾಡುವ ಹಳದಿ ಬಣ್ಣ ಕ್ಯಾನ್ಸ‌ರ್ ಅಂಶ ಪತ್ತೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಸುರಕ್ಷಿತ ಆಹಾರ ಮಾರಾಟ ಹೆಚ್ಚಾಗುತ್ತಿದೆ. ಇದಕ್ಕೆ ಸಾಕ್ಷಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಸಂಗ್ರಹಿಸಿದ ಮಾದರಿಯ ಪರೀಕ್ಷಾ ವರದಿ. ಸ್ಯಾಂಪಲ್ ಪರಿಶೀಲನೆ ವೇಳೆ ನಗರದಲ್ಲಿ ಮಾರಾಟವಾಗುವ ವಿವಿಧ ಆಹಾರದಲ್ಲಿ ಕ್ಯಾನ್ಸರ್ ಅಂಶ ಪತ್ತೆಯಾಗಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ.

ರಾಜಧಾನಿಯಲ್ಲಿ ದಾಳಿ ಮುಂದುವರಿಸಿದ ಅಧಿಕಾರಿಗಳಿಗೆ ಸಿಹಿ ತಿಂಡಿಗಳಲ್ಲೂ ಕ್ಯಾನ್ಸರ್ ಅಂಶ ಇರುವುದು ತಿಳಿದು ಬಂದಿದೆ. ಜನರನ್ನು ಆಕರ್ಷಿಸಲು ಬೇಕರಿ ಹಾಗೂ ಹೋಟೆಲ್‌ಗಳಲ್ಲಿ ರಾಸಾಯನಿಕ ಬಣ್ಣವನ್ನು ಬಳಸಿ ಸಿಹಿ ತಿಂಡಿಗಳನ್ನು ತಯಾರಿಸಲಾಗುತ್ತದೆ. ಈ ಬಣ್ಣ ಆರೋಗ್ಯಕ್ಕೆ ಹಾನಿಕಾರಕ ಎಂದು ಪರಿಶೀಲನೆಯಿಂದ ತಿಳಿದು ಬಂದಿದೆ. ವಿಶೇಷವಾಗಿ ಬೇಕರಿಗಳಲ್ಲಿ ಸಿಗುವ ಬಗೆ ಬಗೆಯ ಬಣ್ಣದ ಸಿಹಿ ತಿಂಡಿಗಳಲ್ಲಿ ಬಳಸುವ ರಾಸಾಯನಿಕ ಬಣ್ಣದಲ್ಲಿ ಕ್ಯಾನರ್ ಅಂಶ ಇರುವುದು ಗೊತ್ತಾಗಿದೆ. ಅಷ್ಟೇ ಅಲ್ಲದೆ ಇದರಲ್ಲಿ ಸಕ್ಕರೆ ಅಂಶ ಹೆಚ್ಚಾಗಿದ್ದು ಇದರಿಂದ ಡಯಾಬಿಟಿಸ್ ಬರುವ ಸಾಧ್ಯತೆ ಇದೆ. ಹೀಗಾಗಿ ತಿನ್ನಲು ಯೋಗ್ಯವಲ್ಲದ ಸಿಹಿ ತಿಂಡಿಗಳ ಮಾರಾಟ ಮಳಿಗೆಗಳಿಗೆ ಆಹಾರ ಇಲಾಖೆ ನೋಟೀಸ್ ನೀಡಿದೆ. ಅಲ್ಲದೆ ಸ್ವಚ್ಚತೆ ಇಲ್ಲದ, ಕಲಬೆರೆಕೆ ಮಾಡುವ, ಪರವಾನಿಗೆ ಪಡೆಯದ ಬೇಕರಿ ಹಾಗೂ ಅಂಗಡಿಗಳಿಗೆ ಆಹಾರ ಇಲಾಖೆ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ. ಹತ್ತಕ್ಕೂ ಹೆಚ್ಚು ಸಿಹಿ ತಿಂಡಿಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ. ಮೈಸೂರು ಪಾಕ್, ಮಿಕ್ಸ್ಚರ್, ಜಿಲೇಬಿ, ಜಹಂಗೀರ್‌ನಲ್ಲಿ ಕೃತಕ ಬಣ್ಣ ಬಳಕೆ ಮಾಡಿರುವುದು ಗೊತ್ತಾಗಿದೆ. ಅಲ್ಲದೆ ಈ ಸಿಹಿ ತಿಂಡಿಗಳಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗಿರುವುದು ಪರಿಶೀಲನೆಯಿಂದ ತಿಳಿದು ಬಂದಿದೆ. ಇದರ ಬೆನ್ನೆಲ್ಲೆ ಹಲವೆಡೆ ದಾಳಿ ನಡೆಸಿ ಮಾದರಿ ಸಂಗ್ರಹಿಸಿ ಪರಿಶೀಲನೆಗೆ ಕಳುಹಿಸಲಾಗಿದೆ. ಈ ಪರೀಕ್ಷಾ ವರದಿಯಲ್ಲಿ ಕೆಲ ಸಿಹಿ ತಿಂಡಿಗಳು ತಿನ್ನಲು ಯೋಗ್ಯವಾಗಿಲ್ಲ. ಈ ಸ್ವೀಟ್‌ಗಳಲ್ಲಿ ಕಲಬೆರೆಕೆ, ಕಲರಿಂಗ್ ಬಳಕೆ ಮಾಡಲಾಗಿದೆ. ಇದರ ಸೇವನೆಯಿಂದ ಕ್ಯಾನ್ಸರ್, ಡಯಾಬಿಟಿಸ್‌ಗೆ ಕಾರಣವಾಗುವ ಅಂಶ ದೇಹ ಸೇರುತ್ತದೆ ಎಂದು ಎಚ್ಚರಿಸಲಾಗಿದೆ.

ಸ್ವೀಟ್ಸ್‌ಗಳಲ್ಲಿ ಬಳಕೆ ಮಾಡುವ ಕಲರ್ ಕ್ಯಾನ್ಸರ್ ಮಾತ್ರವಲ್ಲದೆ, ಹೆಪಟೈಟಿಸ್, ಡಯಾಬಿಟಿಸ್ ಗೆ ಕಾರಣವಾಗುತ್ತದೆ ಎಂದು ಆಹಾರ ತಜ್ಞರು ಹೇಳಿದ್ದಾರೆ. ಮಿಕ್ಸ್ಚರ್ ಹಾಗೂ ಜಿಲೇಜಿ ತಯಾರಿಕೆಯಲ್ಲಿ ಬಳಕೆ ಮಾಡುವ ಹಳದಿ ಬಣ್ಣ ಕ್ಯಾನ್ಸರ್ ಕಾರಕ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!