ಜನ ಮನದ ನಾಡಿ ಮಿಡಿತ

Advertisement

ಉತ್ತರ ಪ್ರದೇಶ : ಪ್ರಯಾಗ್‌ರಾಜ್‌ನಲ್ಲಿ ಮಲಗಿದ್ದ ವಾಯುಪಡೆ ಎಂಜಿನಿಯರ್‌ ಗುಂಡಿಕ್ಕಿ ಹತ್ಯೆ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮನೆಯಲ್ಲಿ ಮಲಗಿದ್ದ ಭಾರತೀಯ ವಾಯುಪಡೆಯ ಸಿವಿಲ್ ಎಂಜಿನಿಯರ್‌ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ಕಿಟಕಿಯಿಂದಲೇ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಶನಿವಾರ ನಡೆದಿದೆ. ವಾಯುಪಡೆಯ ಸಿವಿಲ್ ಎಂಜಿನಿಯರ್‌ ಎಸ್‌.ಎನ್‌.ಮಿಶ್ರಾ(51) ಹತ್ಯೆಗೀಡಾದವರು.

 

ಪ್ರಯಾಗ್‌ರಾಜ್‌ನ ಕಂಟೋನ್ಮೆಂಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಮಿಶ್ರಾ ಮಲಗಿದ್ದಾಗ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿ ಕಿಟಕಿಯಿಂದ ಗುಂಡು ಹಾರಿಸಿದ್ದಾನೆ. ಈ ಸಂದರ್ಭದಲ್ಲಿ ಅವರ ಎದೆಗೆ ಗುಂಡು ತಗುಲಿದೆ. ತಕ್ಷಣವೇ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಎಸ್‌.ಎನ್‌.ಮಿಶ್ರಾ ಮೃತಪಟ್ಟಿದ್ದಾರೆ. ಎಂಜಿನಯರ್ಸ್‌ ಕಾಲೋನಿಯ ಗಡಿ ದಾಟಿ ವ್ಯಕ್ತಿಯೊಬ್ಬ ಬರುತ್ತಿರುವ ದೃಶ್ಯ ಸಿಸಿಟೀವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಗುಂಡು ಹಾರಿಸಿದವನ ಪತ್ತೆಗೆ ತನಿಖೆ ಮುಂದುವರೆಸಿದ್ದಾರೆ.

 

 

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!