ಜನ ಮನದ ನಾಡಿ ಮಿಡಿತ

Advertisement

ಮಹಾರಾಷ್ಟ್ರ: ಮದುವೆಯಾಗುವುದಾಗಿ ಒಪ್ಪಿಸಿ ವೈದ್ಯೆ ಮೇಲೆ ಅತ್ಯಾಚಾರ, ಐಪಿಎಸ್‌ ಅಧಿಕಾರಿ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ನಾಗ್ಪುರದಲ್ಲಿ ಮಹಿಳಾ ವೈದ್ಯೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಐಪಿಎಸ್‌ ಅಧಿಕಾರಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಇತ್ತೀಚೆಗೆ ನಾಗ್ಪುರದ ಇಮಾಮ್‌ವಾಡಾ ಪೊಲೀಸ್‌ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ.

ಮಹಿಳೆ ಎಂಬಿಬಿಎಸ್‌ ಕೋರ್ಸ್‌ ಓದುತ್ತಿದ್ದ ವೇಳೆ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ ಮೂಲಕ ವ್ಯಕ್ತಿಯ ಪರಿಚಯವಾಗಿದೆ. ವ್ಯಕ್ತಿಯು ಆ ಸಂದರ್ಭದಲ್ಲಿ ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದನು. ಇಬ್ಬರು ಸ್ನೇಹಿತರಾಗಿದ್ದು, ಆರೋಪಿಯು ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಆಕೆಯ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವ್ಯಕ್ತಿ ಐಪಿಎಸ್‌ ಗೆ ಆಯ್ಕೆಯಾದ ಬಳಿಕ, ಮಹಿಳೆಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಈ ಕುರಿತು ಮಹಿಳೆ ವ್ಯಕ್ತಿಯ ಪೋಷಕರನ್ನು ಸಂಪರ್ಕಿಸಿದ್ದು, ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದರಿಂದ ಅಸಮಾಧನಾಗೊಂಡ ಆಕೆ ಪೊಲೀಸರಿಗೆ ದೂರು ನೀಡಿದ್ದಾಳೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆಕೆಯ ದೂರಿನ ಆಧಾರದ ಮೇಲೆ, ಐಪಿಎಸ್‌ ಅಧಿಕಾರಿಯ ವಿರುದ್ಧ ಅತ್ಯಾಚಾರ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!