ಮಧ್ಯಪ್ರದೇಶದ ಗುಣದಲ್ಲಿ ಹನುಮಾನ್ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ 9 ಜನರನ್ನು ಬಂಧಿಸಲಾಗಿದೆ ಮತ್ತು 25 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಹನುಮಾನ್ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮಧ್ಯಪ್ರದೇಶದ ಗುಣದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಒಟ್ಟು 9 ಜನರನ್ನು ಪೊಲೀಸರು ಬಂಧಿಸಿದ್ದಾರೆ, 25 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಕಿಶೋರ್ ಕನ್ಯಾಳ್ ಹಾಗೂ ಎಸ್‌ಪಿ ಸಂಜೀವ್ ಕುಮಾರ್ ಭೇಟಿ ನೀಡಿದ್ದು, ಸ್ಥಳದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಎರಡು ಸಮುದಾಯಗಳ ಸದಸ್ಯರೊಂದಿಗೆ ಮಾತುಕತೆ ನಡೆಸಿದ್ದಾರೆ.
ಬಿಜೆಪಿ ಕೌನ್ಸಿಲರ್ ಗಬ್ಬರ್ ಎಂದೂ ಕರೆಯಲ್ಪಡುವ ಓಂಪ್ರಕಾಶ್ ಕುಶ್ವಾಹ್, ಶನಿವಾರ ಪೊಲೀಸ್ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ, ಸುಮಾರು 25 ಜನರ ಮೇಲೆ ಕೊಲೆ ಯತ್ನ, ಹಲ್ಲೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊರಿಸಲಾಗಿದೆ. ಹನುಮಾನ್ ಜಯಂತಿಯ ಧಾರ್ಮಿಕ ಮೆರವಣಿಗೆ ಸಾಗುವ ವೇಳೆ ಕೆಲವರು ಗುಂಡನ್ನು ಕೂಡ ಹಾರಿಸಿದ್ದಾರೆ ಎಂದು ಅವರು ದೂರಿದ್ದಾರೆ.



