ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ‘ಮಂಗಳೂರಿಗೂ ವಂದೇ ಭಾರತ್ ಸ್ಲೀಪರ್ ರೈಲು ನೀಡಲಾಗುವುದು’ – ಸಚಿವ ವಿ. ಸೋಮಣ್ಣ

ಮಂಗಳೂರು ಮುಂದಿನ ಒಂದೂವರೆ ತಿಂಗಳಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಭೋಗಿಗಳು ಬರಲಿದ್ದು, ಒಂದನ್ನು ಮಂಗಳೂರಿಗೂ ನೀಡಲಾಗುವುದು ಎಂದು ಕೇಂದ್ರ ರೈಲ್ವೇ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಶನಿವಾರ ಮಂಗಳೂರು ಸೆಂಟ್ರಲ್- ಕಬಕ ಪುತ್ತೂರು- ಪ್ಯಾಸೆಂಜರ್ ರೈಲಿನ ಸುಬ್ರಹ್ಮಣ್ಯ ರೋಡ್ ನಿಲ್ದಾಣದವರೆಗಿನ ವಿಸ್ತರಣೆಗೆ ಹಸಿರು ನಿಶಾನೆ ನೀಡಿ ಮಾತನಾಡಿದ ಅವರು ‘ಮಂಗಳೂರು, ಬೆಂಗಳೂರು ಸಂಸ್ಕಾರ, ಸಂಸ್ಕೃತಿ ಮತ್ತು ಸಹಬಾಳ್ವೆಗೆ ದೇಶದಲ್ಲಿ ಹೆಸರು ಪಡೆದಿದೆ. ಕರಾವಳಿ ಭಾಗದ ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದ ಅಭಿವೃದ್ಧಿ ಕಾರ್ಯ 19 ಕೋಟಿ ರೂ.ಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಶೇ. 85ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಆಗಸ್ಟ್‌ನೊಳಗೆ ಸಂಪೂರ್ಣ ಕಾಮಗಾರಿ ಮುಕ್ತಾಯವಾಗಲಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ವಿಶ್ವದರ್ಜೆಗೇರಿಸುವ ಮಾಸ್ಟರ್ ಪ್ಲಾನ್ ತಯಾರಾಗಿದ್ದು, ಟೆಂಡರ್ ಕರೆದು ಎರಡು ವರ್ಷಗಳಲ್ಲಿ ಲೋಕಾರ್ಪಣೆಯಾಗಲಿದೆ ಎಂದರು.

ಸುಬ್ರಹ್ಮಣ್ಯ ನಿಲ್ದಾಣದಲ್ಲಿ ಅಮೃತ್ ಭಾರತ್ ಯೋಜನೆಯಡಿ 24 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಭಕ್ತಾದಿ ಗಳ ತಾಣವಾಗಿರುವ ಆ ನಿಲ್ದಾಣದಲ್ಲಿ ವಿಕಲಚೇತನರಿಗೂ ಪೂರಕವಾಗಿ ಎಕ್ಸಲೇಟರ್ ವ್ಯವಸ್ಥೆ ಮಾಡಲಾಗುತ್ತಿದ್ದು, ಸೆಪ್ಟಂಬರ್ 25ರೊಳಗೆ ಈ ಎಲ್ಲಾ ಕಾಮಗಾರಿಗಳು ಪೂರ್ಣಣಗೊಳ್ಳಲಿವೆ ಎಂದು ಸಚಿವ ಸೋಮಣ್ಣ ವಿವರ ನೀಡಿದರು.

Leave a Reply

Your email address will not be published. Required fields are marked *

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

ಬಂಟ್ವಾಳ: ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃ*ತ್ಯು….!

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

error: Content is protected !!