ಹೆಜ್ಜೇನು ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹಾಸನದ ಅರಕಲಗೂಡು ತಾಲೂಕಿನ ಕೊಣನೂರು ಹೋಬಳಿ ಕಂಟೇನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ರೈತ ನಂಜುಂಡ (50) ಮೃತರು. ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹೆಜ್ಜೇನು ಹುಳುಗಳು ದಾಳಿ ಮಾಡಿ ಚುಚ್ಚಿವೆ. ಇದರಿಂದಾಗಿ ಅವರು ಸ್ಥಳದಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ ಮತ್ತು ಮಗನನ್ನು ಅಗಲಿದ್ದಾರೆ. ಈ ಕುರಿತು ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



