ಜನ ಮನದ ನಾಡಿ ಮಿಡಿತ

Advertisement

ಮಹಾರಾಷ್ಟ್ರ : ಕಸದ ಬುಟ್ಟಿಯಲ್ಲಿ ಸಿಕ್ಕಿದ್ದ ಅಂಧ ಮಗು ಈಗ ಅಸಿಸ್ಟಂಟ್ ಕಲೆಕ್ಟರ್

25 ವರ್ಷಗಳ ಹಿಂದೆ ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದಲ್ಲಿ ಅಂಧ ಮಗುವೊಂದು ಕಸದ ಬುಟ್ಟಿಯಲ್ಲಿ ಪತ್ತೆಯಾಗಿತ್ತು. ನಂತರ ಪೊಲೀಸರು ಮಗುವನ್ನು ರಕ್ಷಿಸಿ ಸುಧಾರಣಾ ಗೃಹಕ್ಕೆ ಕರೆದ್ಯೊಯಿದಿದ್ದಾರೆ. ಈಗ ಇದೇ ಮಗು ಬೆಳೆದು ದೊಡ್ಡವಳಾಗಿ ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಸಮಾಜದಲ್ಲಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇತ್ತೀಚೆಗೆ ಇವರಿಗೆ ನೇಮಕಾತಿ ಪತ್ರವೂ ಸಿಕ್ಕಿದೆ.

ಆ ಯುವತಿಯ ಹೆಸರೇ ಮಾಲಾ ಪಾಪಲ್ಕರ್. ಮಾಲಾ ನಾಗ್ಪುರ ಕಲೆಕ್ಟರೇಟ್‌ನಲ್ಲಿ ತನ್ನ ಮೊದಲ ಹುದ್ದೆಯನ್ನು ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲಿ ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗದ ಕ್ಲರ್ಕ್-ಕಮ್-ಟೈಪಿಸ್ಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಮಾಲಾ ಪಾಪಲ್ಕರ್ ಸುದ್ದಿಯಾಗಿದ್ದರು. ಮೂರು ದಿನಗಳ ಹಿಂದೆ, 26 ವರ್ಷದ ಮಾಲಾ ಅವರಿಗೆ ನಾಗ್ಪುರ ಕಲೆಕ್ಟರೇಟ್‌ನಲ್ಲಿ ಕಂದಾಯ ಸಹಾಯಕಿಯಾಗಿ ನೇಮಕಗೊಂಡಿರುವ ಬಗ್ಗೆ ಮಾಹಿತಿ ನೀಡುವ ಪತ್ರ ಬಂದಿದೆ. ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ ಮುಂದಿನ 8-10 ದಿನಗಳಲ್ಲಿ ಮಾಲಾ ಕೆಲಸಕ್ಕೆ ವರದಿ ಮಾಡಿಕೊಳ್ಳುವ ಸಾಧ್ಯತೆಯಿದೆ.

ಮಾಲಾ ಹುಟ್ಟಿನಿಂದಲೇ ಕುರುಡಳಾಗಿದ್ದರೂ, ಅನಾಥಾಶ್ರಮದ ಬೆಂಬಲ ಮತ್ತು ದೃಷ್ಟಿಹೀನ ವಿದ್ಯಾರ್ಥಿಗಳಿಗೆ ವಿಶೇಷ ಶಿಕ್ಷಣದ ಪ್ರವೇಶದೊಂದಿಗೆ, ಅವರು ತಮ್ಮ ಅಧ್ಯಯನವನ್ನು ಮುಂದುವರೆಸಿದ್ದಾರೆ. ಮಾಲಾ ಅವರ ಹೋರಾಟದ ಕಥೆ ಮಹಾರಾಷ್ಟ್ರಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಸ್ಫೂರ್ತಿಯಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!