ಜನ ಮನದ ನಾಡಿ ಮಿಡಿತ

Advertisement

ಜಮ್ಮು: ಪ್ರವಾಹಕ್ಕೆ ಮೂವರು ಬಲಿ; ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ

ಜಮ್ಮು-ಕಾಶ್ಮೀರದ ರಾಂಬನ್‌ ಜಿಲ್ಲೆಯಲ್ಲಿ ಮೇಘಸ್ಫೋಟದ ಪರಿಣಾಮ ಭಾನುವಾರ ಸುರಿದ ಭಾರೀ ಮಳೆಯಿಂದ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಣಾಮವಾಗಿ ಮೂವರು ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ.

ಶನಿವಾರವೂ ಸಿಡಿಲು ಬಡಿದು ಓರ್ವ ಮಹಿಳೆ ಸೇರಿ ಇಬ್ಬರು ಸಾವನ್ನಪ್ಪಿದ್ದು, ಕಳೆದೆರಡು ದಿನದಲ್ಲಿ ಜಮ್ಮುವಿನಲ್ಲಿ ಮಳೆಯಿಂದಾಗಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಮೇಘಸ್ಫೋಟದೊಂದಿಗೆ ವೇಗವಾಗಿ ಬೀಸುವ ಗಾಳಿ, ಭೂಕುಸಿತ, ಆಲಿಕಲ್ಲು ಮಳೆಯೂ ಸಂಭವಿಸಿದ್ದು, ಧರಂ ಕುಂಡ್‌ ಗ್ರಾಮದಲ್ಲಿ 10 ಮನೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿದೆ. 40ಕ್ಕೂ ಅಧಿಕ ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹಲವು ವಾಹನಗಳೂ ಕೊಚ್ಚಿಕೊಂಡು ಹೋಗಿವೆ. ಸುರಿಯುತ್ತಿದ್ದ ಧಾರಾಕಾರ ಮಳೆಯ ನಡುವೆಯೂ ಪೊಲೀಸರು ರಕ್ಷಣಾ ಕಾರ್ಯ ಕೈಗೊಂಡಿದ್ದು, 100ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ.

ಜಮ್ಮು-ಶ್ರೀನಗರ ನಡುವಿನ 250 ಕಿ.ಮೀ ಉದ್ದದ ಸರ್ವಋತು ರಾಷ್ಟ್ರೀಯ ಹೆದ್ದಾರಿಯ ಬಳಿ ಹಲವು ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಭಾರೀ ಬಂಡೆಗಳು ಉರುಳುತ್ತಿವೆ. ಆದಕಾರಣ, ಪರಿಸ್ಥಿತಿ ಸುಧಾರಿಸುವ ತನಕ ಆ ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!