ಜನ ಮನದ ನಾಡಿ ಮಿಡಿತ

Advertisement

ಗ್ವಾಲಿಯರ್ : 3 ವರ್ಷದ ಮಗು ಮೇಲೆ ಮನೆ ಮಾಲೀಕನ ಮಗನಿಂದ ಅತ್ಯಾಚಾರ

ಮೂರು ವರ್ಷದ ಮಗುವಿನ ಮೇಲೆ ಮನೆ ಮಾಲೀಕನ ಮಗ ಸ್ನೇಹಿತನೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆದಿದೆ. ಇಬ್ಬರೂ ಚಾಕೊಲೇಟ್​ ಕೊಡಿಸುವುದಾಗಿ ನಂಬಿಸಿ ಕಾರಿನಲ್ಲಿ ಕರೆಸೊಯ್ದು ಅತ್ಯಾಚಾರವೆಸಗಿದ್ದಾರೆ. ಈ ಘಟನೆ ಗ್ವಾಲಿಯರ್‌ನ ದಾಬ್ರಾ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲೋನಿಯಲ್ಲಿ ನಡೆದಿದೆ.

ಆರೋಪಿಗಳಲ್ಲಿ ಒಬ್ಬ ಮನೆ ಮಾಲೀಕನ ಮಗ, ಮಾಹಿತಿ ಪ್ರಕಾರ ಇಬ್ಬರು ಹುಡುಗರು ಬಾಲಕಿಗೆ ಚಾಕೊಲೇಟ್​ ಕೊಟ್ಟು ಕಾರಿನಲ್ಲಿ ಕೂರಿಸಿ ಕೊರೆದೊಯ್ದಿದ್ದಾರೆ. ಕಾರಿನೊಳಗೆ ಅವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಆ ಮಗುವಿನ ಬಳಿ ಮನೆಯಲ್ಲಿ ಯಾರಿಗೂ ಏನೂ ಹೇಳಬೇಡ ಎಂದು ಹೇಳಿ ಮನೆಯ ಬಳಿ ಬಿಟ್ಟು ಹೋಗಿದ್ದಾರೆ. ಆದರೆ, ಹುಡುಗಿ ತನ್ನ ತಾಯಿಗೆ ನಡೆದ ಘಟನೆಯನ್ನೆಲ್ಲಾ ವಿವರಿಸಿದ್ದಾಳೆ. ನಂತರ ಆಕೆಯ ಪೋಷಕರು ನೇರವಾಗಿ ದಾಬ್ರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇಬ್ಬರೂ ಆರೋಪಿಗಳನ್ನು ತ್ವರಿತವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯ ಗಂಭೀರತೆಯನ್ನು ಪರಿಗಣಿಸಿ, ಎಸ್‌ಡಿಒಪಿ ದಬ್ರಾ ಜಿತೇಂದ್ರ ನಾಗೈಚ್, ಸಿಎಸ್‌ಪಿ ಕಿರಣ್ ಅಹಿರ್ವಾರ್ ಮತ್ತು ಮಹಿಳಾ ಪೊಲೀಸ್ ಠಾಣೆಯ ಉಸ್ತುವಾರಿ ಬಲ್ವಿಂದರ್ ಧಿಲ್ಲೋನ್ ಸ್ಥಳಕ್ಕೆ ಭೇಟಿ ನೀಡಿದ್ದು, ಪೋಕ್ಸೋ ಕಾಯ್ದೆ ಮತ್ತು ಅತ್ಯಾಚಾರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಎಸ್ಪಿ ನಿರಂಜನ್ ಶರ್ಮಾ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲು ಮತ್ತು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ತಂಡಗಳನ್ನು ರಚಿಸಿ ವಿವಿಧ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ .

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!