ಪಹಲ್ಗಾಮ್‌ನಲ್ಲಿ ನಡೆದಿರೋ ಉಗ್ರ ಕೃತ್ಯವನ್ನ ಪಕ್ಷಾತೀತವಾಗಿ ಎದುರಿಸಬೇಕಿದೆ. ಈ ನಿಟ್ಟಿನಲ್ಲಿ ಇವತ್ತು ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆ ಕರೆದಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಉಗ್ರರ ಸವಾಲನ್ನ ಮೆಟ್ಟಿ ನಿಲ್ಲಲು ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಲಿದೆ. ವಿಪಕ್ಷಗಳ ನಾಯಕರ ಅಭಿಪ್ರಾಯವನ್ನ ರಕ್ಷಣಾ ಸಚಿವರು ಆಲಿಸಲಿದ್ದಾರೆ. ಭಯೋತ್ಪಾದಕರ ದಾಳಿ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಇಂದು ನಡೆಯುವ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ INDIA ಒಕ್ಕೂಟದ ಪ್ರಮುಖರು ಭಾಗಿಯಾಗಲಿದ್ದಾರೆ.



