ಜನ ಮನದ ನಾಡಿ ಮಿಡಿತ

Advertisement

ಶಿವಮೊಗ್ಗ: ಸ್ವಗ್ರಾಮಕ್ಕೆ ಮಂಜುನಾಥ ರಾವ್ ಪಾರ್ಥಿವ ಶರೀರ; ಕಂಬನಿ ಮಿಡಿದ ಶಿವಮೊಗ್ಗ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮೃತರಾದ ಮಂಜುನಾಥ ರಾವ್ ಪಾರ್ಥಿವ ಶರೀರ ಶಿವಮೊಗ್ಗದ ತಮ್ಮ ಸ್ವ ಗ್ರಾಮಕ್ಕೆ ಬರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.

 

ಪಾರ್ಥಿವ ಶರೀರ ಶಿವಮೊಗ್ಗದ ಎಂ.ಆರ್.ಎಸ್.ವೃತ್ತಕ್ಕೆ ಬರುತ್ತಿದ್ದಂತೆಯೇ ಹಿಂದೂ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಬೈಕ್ ರ್‍ಯಾಲಿ ಮೂಲಕ ಬರಮಾಡಿಕೊಂಡರು. ಮೃತ ಮಂಜುನಾಥ ಮನೆಯ ಎದುರು ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ.

‘ಭಾರತ ಮಾತೆಗೆ ಹೂ ಹಾಕಿ, ಪಾಕಿಸ್ತಾನಕ್ಕೆ ಬಾಂಬ್ ಹಾಕಿ’ ಎನ್ನುವ ಘೋಷಣೆ ಕೂಗುತ್ತಾ, ಜೆಸಿಬಿಯ ಮುಂಭಾಗ ಉಗ್ರರ ಪ್ರತಿಕೃತಿ ತೂಗುಹಾಕಿ ರ್‍ಯಾಲಿ ನಡೆಸಿ, ಪಾಕಿಸ್ತಾನ ವಿರುದ್ಧ ಆಕ್ರೋಶ ಹೊರಹಾಕಿದರು.

ಬಿ.ಎಚ್.ರಸ್ತೆಯ ಮೂಲಕ ಸಾಗಿದ ಆಂಬುಲೆನ್ಸ್ ಮೂಲಕ ಸಾಗಿ ಬೆಕ್ಕಿನಕಲ್ಮಠ, ಮೀನಾಕ್ಷಿ ಭವನ, ಅಮಿರ್ ಅಹ್ಮದ್ ವೃತ್ತ ಮೂಲಕ ಮುಖ್ಯ ಬಸ್ ನಿಲ್ದಾಣದಿಂದ ಸಾಗರ ರಸ್ತೆಯ ಸರ್ಕಿಟ್ ಹೌಸ್, ಆಯನೂರು ಗೇಟ್ ಮೂಲಕ ವಿಜಯ ನಗರ ಬಡಾವಣೆಯ ನೇತಾಜಿ ವೃತ್ತ ಸಮೀಪದ ಮನೆಗೆ ಪಾರ್ಥಿವ ಶರೀರ ತಲುಪಿತು. ದಾರಿ ಉದ್ದಕ್ಕೂ ಸಾವಿರಾರು ಜನರು ಸೇರಿದ್ದರು. ಮಂಜುನಾಥ ರಾವ್ ನಿಧನಕ್ಕೆ ಕಂಬನಿ ಮಿಡಿದರು. ನಗರದಾದ್ಯಂತ ಅಂಗಡಿ–ಮುಗ್ಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಲಾಗಿತ್ತು.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!