ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಕಾಲೇಜಿನ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್

ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ ಇದರ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಸಂದರ್ಭದಲ್ಲಿ ಇನ್ಫೋಸಿಸ್ ಸಂಸ್ಥೆಯ ಸಿ.ಎಸ್.ಆರ್ ನಿಧಿಯಿಂದ ಪ್ರೇರಣಾ ಟ್ರಸ್ಟ್ ಸಹಕಾರದೊಂದಿಗೆ ನಿರ್ಮಾಣಗೊಂಡ ಸುಸಜ್ಜಿತ ಕಂಪ್ಯೂಟರ್ ಲ್ಯಾಬನ್ನು ಶಾಸಕ ವೇದವ್ಯಾಸ ಕಾಮತ್ ರವರು ಅಧಿಕೃತವಾಗಿ ಉದ್ಘಾಟನೆಗೊಳಿಸಿದರು.

ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕರು, ಈ ಬಾರಿಯ ಕಾಲೇಜಿನ ವಾರ್ಷಿಕೋತ್ಸವದ ಸಂಭ್ರಮವು ಬಹುಕಾಲ ನೆನಪಿನಲ್ಲಿ ಉಳಿಯಲಿದೆ. ನೂತನವಾಗಿ ನಿರ್ಮಾಣಗೊಂಡ ಕಂಪ್ಯೂಟರ್ ಲ್ಯಾಬ್ ನಿಂದಾಗಿ ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯಾಸಂಗಕ್ಕೆ ಅನುಕೂಲವಾಗಲವಾಗಲಿದ್ದು, ಲ್ಯಾಬ್ ನ ಅಗತ್ಯತೆ ಬಗ್ಗೆ ಇಲ್ಲಿನ ಪ್ರಾಂಶುಪಾಲರು ನನ್ನ ಗಮನಕ್ಕೆ ತಂದ ಮರುಕ್ಷಣವೇ ಈ ಬಗ್ಗೆ ವಿಶೇಷ ಗಮನಹರಿಸಿ ಆದ್ಯತೆಯ ಮೇರೆಗೆ ಅನುಕೂಲ ಮಾಡಿಕೊಡುವಂತೆ ಇನ್ಫೋಸಿಸ್ ಸಂಸ್ಥೆಯನ್ನು ಕೋರಿದ್ದೆ. ಅದರಂತೆ ಇದೀಗ ಪದವಿ ಕಾಲೇಜಿಗೆ 30 ಕಂಪ್ಯೂಟರ್ ಗಳ ಸಹಿತ ಸುಸಜ್ಜಿತ ಲ್ಯಾಬ್ ನಿರ್ಮಾಣಗೊಂಡಿದ್ದು ವಿದ್ಯಾರ್ಥಿಗಳಿಗೆ ಒಳಿತಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕರಾದ ಪ್ರೊ. ಕೆ.ಆರ್. ಕವಿತ, ಇನ್ಫೋಸಿಸ್ ನ ಪ್ರಮುಖರಾದ ಸಂದೀಪ್ ಡಿಸಿಲ್ವ, ಪ್ರಾಂಶುಪಾಲರಾದ ಪ್ರೊ. ಜಗದೀಶ ಬಾಳ, ಡಾ. ಚಂದ್ರಶೇಖರ ಕೆ.,ವಿದ್ಯಾರ್ಥಿ ಪರಿಷತ್ತಿನ ಪ್ರಮುಖರು, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕ-ರಕ್ಷಕ ಸಂಘ, ಹಳೆವಿದ್ಯಾರ್ಥಿ ಸಂಘ, ಬೋಧಕ ಹಾಗೂ ಬೋಧಕೇತರ ವೃಂದ ಮತ್ತು ಕಾಲೇಜಿನ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!