ರಾಷ್ಟ್ರೀಯ ಹೆದ್ದಾರಿ 66ರ ಕೂಳೂರು ಬಳಿ ನಡೆಯುತ್ತಿರುವ ಕಾಮಗಾರಿಗಳಿಂದಾಗಿ ಸಾರ್ವಜನಿಕರಿಗೆ ಭಾರೀ ಕಿರಿಕಿರಿಯಾಗುತ್ತಿದೆ. ನಿಗದಿತ ಸಮಯದೊಳಗೆ ಕಾಮಗಾರಿ ಪೂರ್ಣಗೊಳಿಸಿ, ಸಾರ್ವಜನಿಕ ಜೀವನ ಸುಗಮಗೊಳಿಸಿ ಎಂದು ಒತ್ತಾಯಿಸಿ ಇಂದು ನಾಗರಿಕ ಹಿತರಕ್ಷಣಾ ಸಮಿತಿ ಬೃಹತ್ ಪ್ರತಿಭಟನೆ ನಡೆಸಿದೆ.

ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯಿಂದಾಗಿ ಕೂಳೂರಿನಲ್ಲಿ ಜನಸಂಚಾರ ಮಾಡದಂತಾಗಿದೆ. ಸೇತುವೆ ನಿರ್ಮಾಣದ ಹೆಸರಲ್ಲಿ ಜನತೆಗೆ ಕಿರುಕುಳ ನೀಡಲಾಗುತ್ತಿದೆ. ಇದರಿಂದಾಗಿ ಸ್ಥಳೀಯ ನಾಗರಿಕರಿಗೆ, ವ್ಯಾಪಾರಸ್ಥರಿಗೆ, ವಾಹನ ಚಾಲಕರಿಗೆ, ಶಾಲಾ ಮಕ್ಕಳಿಗೆ, ಕಾರ್ಮಿಕರಿಗೆ ತೊಂದರೆಯಾಗುತ್ತಿದೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸಿಕೊಡಿ ಎಂದು ಪ್ರತಿಭಟನಕಾರರು ಆಗ್ರಹಿಸಿದರು.




