ಕೆಲ ದಿನಗಳಿಂದ ಚಿನ್ನದ ಬೆಲೆ ಇಳಿಕೆ ಆಗುತ್ತಿರುವುದು ಈ ವಾರವೂ ಮುಂದುವರಿಯುವಂತಿದೆ. ಇಂದು ಚಿನ್ನದ ಬೆಲೆ ಗ್ರಾಮ್ಗೆ 62 ರೂ. ನಷ್ಟು ಕುಸಿತ ಆಗಿದೆ. ಒಂದು ಗ್ರಾಮ್ಗೆ 9,002 ರೂ. ಇದ್ದ 22 ಕ್ಯಾರಟ್ ಚಿನ್ನದ ಬೆಲೆ 8,940 ರೂ. ಗೆ ಇಳಿದಿದೆ.

ಅಪರಂಜಿ ಚಿನ್ನದ ಬೆಲೆ 9,753 ರೂ ಆಗಿದೆ. ಬೆಳ್ಳಿ ಬೆಲೆಯೂ ಅಲ್ಪ ಇಳಿಕೆ ಕಂಡಿದೆ. ವಿದೇಶಗಳಲ್ಲೂ ಚಿನ್ನದ ಬೆಲೆಯಲ್ಲಿ ತುಸು ಮಟ್ಟಿಗಿನ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 89,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 97,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,180 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 89,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,180 ರುಪಾಯಿಯಲ್ಲಿ ಇದೆ.



