ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಪಿದಾಯಿ ಮೇ 9 ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ಅವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು, ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕರಾದ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ ತುಳು ಸಿನಿಮಾ ಪಿದಾಯಿ ಮೇ 9ನೇ ತಾರೀಕಿನಂದು ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ.

ಪಿದಾಯಿ ಚಿತ್ರವು ಕೊಲ್ಕತ್ತ, ಶಿಮ್ಲಾ, ಜಾರ್ಖಂಡ್‌ ಹಾಗೂ ಕ್ಯಾಲಿಫೋರ್ನಿಯಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಧಿಕೃತವಾಗಿ ಆಯ್ಕೆಯಾಗುವುದರ ಜೊತೆಗೆ, 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಥಮ ಬಾರಿಗೆ ತುಳು ಚಿತ್ರವೊಂದು ಭಾರತೀಯ ಚಲನಚಿತ್ರ ಹಾಗೂ ಕನ್ನಡ ಚಲನಚಿತ್ರ ಹೀಗೆ ಎರಡೂ ವಿಭಾಗಗಳ‌ಲ್ಲಿ ಸ್ಪರ್ಧೆಯಲ್ಲಿದ್ದು ಅಂತಿಮವಾಗಿ ಎರಡನೇ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಮಹಾಮಾಯಿ ಪಾತ್ರಿಯಾಗಿ ಕನ್ನಡದ ಖ್ಯಾತ ನಟರಾದ ಶರತ್ ಲೋಹಿತಾಶ್ವರವರು ಅಭಿನಯಿಸಿದ್ದಾರೆ. ಇವರ ಜೊತೆಗೆ ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೋಳಾರ್, ರೂಪಶ್ರೀ ವರ್ಕಾಡಿ, ಇಳಾ ವಿಟ್ಲ, ದೇವಿ ನಾಯರ್, ಪ್ರೀತೇಶ್, ಅನಿಲ್ ರಾಜ್ ಉಪ್ಪಳ, ರವಿ ವರ್ಕಾಡಿ ಹಾಗೂ ಬಾಲ ಪ್ರತಿಭೆಗಳಾದ ಮೋನಿಶ್, ತ್ರಿಷ, ದ್ರುವ, ನಿಹಾ, ಖುಷಿ ಡಿಬಿಸಿ ಶೇಖರ್, ಅನಿತಾ ಚಂದ್ರಶೇಖರ್ ಮುಂತಾದವರು ಅಭಿನಯಿಸಿದ್ದಾರೆ.

ಈ ಸಿನಿಮಾದ ಛಾಯಾಗ್ರಾಹಣವನ್ನು ಉಣ್ಣಿ ಮಾಡವೂರ್‌ರವರು ನಿಭಾಯಿಸಿದ್ದಾರೆ. ಎರಡು ಸಲ ರಾಷ್ಟ್ರ ಪ್ರಶಸ್ತಿ ವಿಜೇತರಾಗಿ, ಅತೀ ಹೆಚ್ಚು ಸಿನಿಮಾ ಸಂಕಲನ ಮಾಡಿರುವ ಸುರೇಶ್ ಅರಸ್ ಇವರು ಈ ಚಿತ್ರಕ್ಕೆ ಸಂಕಲನಕಾರರಾಗಿದ್ದಾರೆ. ಸಂಭಾಷಣೆಯನ್ನು ರಮೇಶ್‌ ಶೆಟ್ಟಿಗಾರ್‌ ಹಾಗೂ ಡಿ.ಬಿ.ಸಿ ಶೇಖರ್‌ ಬರೆದಿದ್ದಾರೆ. ಚಿತ್ರವನ್ನು ದ.ಕ. ಜಿಲ್ಲೆಯ ಮುಡಿಪು ಹಾಗೂ ಮಂಜೇಶ್ವರದ ಗಡಿಪ್ರದೇಶಗಳಲ್ಲಿ ಚಿತ್ರೀಕರಿಸಲಾಗಿದೆ.

ಪದ್ಮಶ್ರೀ ಕೈತಪ್ರಮ್ ದಾಮೋದರನ್ ನಂಬೂದಿರಿ, ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಾದ ಸುಧೀರ್ ಅತ್ತಾವರ, ತುಳು ಅಕಾಡೆಮಿ ಪ್ರಶಸ್ತಿ ವಿಜೇತರಾದ ಕುಶಾಲಾಕ್ಷಿ ಕಣ್ವತೀರ್ಥರವರ ಸಾಹಿತ್ಯವಿದ್ದು, ಅಜಯ್ ನಂಬೂದಿರಿಯವರು ಸಂಗೀತ ನೀಡಿದ್ದಾರೆ. ಪ್ರಸಿದ್ದ ಹಾಡುಗಾರರಾದ ಸಂಗೀತ ವಿದ್ಯಾನಿಧಿ ಡಾಕ್ಟರ್ ವಿದ್ಯಾಭೂಷಣ್ ಪ್ರಪ್ರಥಮವಾಗಿ ಸಿನಿಮಾದಲ್ಲಿ ಹಾಡಿದ್ದಾರೆ ಎಂಬುದು ಇನ್ನೊಂದು ವಿಶೇಷತೆ. ಜೊತೆಗೆ ಹಿನ್ನಲೆ ಗಾಯಕರಾದ ಮೇಧ ವಿದ್ಯಾಭೂಷಣ್, ವಿಜೇಶ್ ಗೋಪಾಲ್ ಮುಂತಾದವರು ಕಂಠದಾನ ಮಾಡಿದ್ದಾರೆ. ಹಿನ್ನಲೆ ಸಂಗೀತವನ್ನು ಕೇರಳ ರಾಜ್ಯ ಪ್ರಶಸ್ತಿ ವಿಜೇತ ಸಂಗೀತಕಾರರಾದ ದೀಪಾಂಕುರನ್ ವಿಶೇಷ ಹಿನ್ನೆಲೆಯ ಸಂಗೀತವನ್ನು ನೀಡಿದ್ದಾರೆ. ಚಿತ್ರದ ಕಲಾನಿರ್ದೇಶಕರಾಗಿ ರಾಜೇಶ್ ಬಂದ್ಯೋಡು, ವಸ್ತ್ರವಿನ್ಯಾಸಕಾರರಾಗಿ ಮೀರಾ ಸಂತೋಷ್, ಮೇಕಪ್ ಮ್ಯಾನ್‌ ಆಗಿ ಬಿನೋಯ್ ಕೊಲ್ಲಮ್, ಮುಖ್ಯ ಸಹನಿರ್ದೇಶಕರಾಗಿ ವಿಘ್ನೇಶ್ ಕುಲಾಲ್, ಸಹ ನಿರ್ದೇಶಕರಾಗಿ ಗಿರೀಶ್ ಆಚಾರ್ ಸುಳ್ಯ, ಪ್ರದೀಪ್ ರಾವ್, ವಿಶ್ವ ಮಂಗಲ್ಪಾಡಿ, ತಂಡದ ಮ್ಯಾನೇಜರ್ ಆಗಿ ರವಿ ವರ್ಕಾಡಿ ಹಾಗೂ ಸ್ಥಿರ ಛಾಯಾಗ್ರಾಹಕರಾಗಿ ದೀಪಕ್‌ ಉಪ್ಪಳ ನಿರ್ವಹಿಸಿದ್ದಾರೆ.

ತುಳುನಾಡಿನ ವಿಶೇಷತೆಯಾದ ಕುಣಿತ ಭಜನೆಯನ್ನು ಮೊದಲ ಬಾರಿಗೆ ಈ ಸಿನಿಮಾದಲ್ಲಿ ಪ್ರಯೋಗಿಸಲಾಗಿದೆ. ಸಂದೀಪ್ ಬಲ್ಲಾಳ್ ಸಂಗೀತ ನೀಡಿದ ಕುಣಿತಭಜನೆಗೆ ಸಾಹಿತ್ಯ ಬರೆದವರು ಯೋಗೀಶ್ ಅಡಕಳಕಟ್ಟೆ. ಖ್ಯಾತ ಕವಿ ಅಡ್ವೋಕೇಟ್ ಶಶಿರಾಜ್ ಕಾವೂರವರು ಬರೆದ ಇನ್ನೊಂದು ಕುಣಿತ ಭಜನೆಗೆ ಶಿನೋಯ್ ಜೋಸೆಫ್ ಸಂಗೀತ ನೀಡಿದ್ದಾರೆ.

ಈ ಚಿತ್ರದಲ್ಲಿ “ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಹಃ” ಎಂಬ ಉಲ್ಲೇಖದೊಂದಿಗೆ ಭೋಜಣ್ಣ ಎಂಬ ಮಹಮ್ಮಾಯಿ ಪಾತ್ರಿಯವರ ಮನೆಗೆ ವಿದ್ಯಾವಂತೆಯೊಬ್ಬಳು ಸೊಸೆಯಾಗಿ ಬಂದಾಗ, ಮುಟ್ಟಿನ ಸಂದರ್ಭದಲ್ಲಿ ಮಹಿಳೆಯರನ್ನು ನಡೆಸಿಕೊಳ್ಳುವ ರೀತಿಯನ್ನು ಕಂಡು ಅವಳು ನಡೆಸುವ ಸಾತ್ವಿಕ ಸಂಘರ್ಷ ಹಾಗೂ ಮಹಿಳೆಯರ ಘನತೆಯನ್ನು ಎತ್ತಿ ಹಿಡಿಯಲು ಭೋಜಣ್ಣ ತೆಗೆದುಕೊಳ್ಳುವ ದೃಢನಿರ್ಧಾರವು ಕಥೆಯ ಜೀವಾಳವಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಾಗ ವ್ಯಾಪಕವಾದ ಪ್ರಶಂಸೆಗೆ ಈ ಚಿತ್ರವು ಭಾಜನವಾಗಿತ್ತು.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!