ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಮರವೂರು ರೈಲ್ವೆ ಸೇತುವೆಯ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಮರಳುಗಾರಿಕೆಗೆ ದಾಳಿ

ಮಂಗಳೂರಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮರವೂರು ರೈಲ್ವೆ ಸೇತುವೆಯ ಬಳಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 150 ಮೆಟ್ರಿಕ್ ಟನ್ ಮರಳು, ಡೋಜರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ತಮಿಳುನಾಡು-ಕೇರಳ-ಮಂಗಳೂರಿನಿಂದ ಮರವೂರು ರೈಲ್ವೆ ಸೇತುವೆ ಮೂಲಕ ಕೊಂಕಣ ರೈಲು ಮಾರ್ಗದಲ್ಲಿ ಪ್ರತಿನಿತ್ಯ 50 ರೈಲುಗಳಲ್ಲಿ 40 ಸಾವಿರದಿಂದ 50 ಸಾವಿರ ಪ್ರಯಾಣಿಕರು ಪ್ರಯಾಣಿಸು ತ್ತಿದ್ದು, ಈ ರೈಲ್ವೆ ಟ್ರ್ಯಾಕ್‌ನ ಕೆಳಭಾಗದಲ್ಲೇ ನಿಯಮ ಮೀರಿ ಅಕ್ರಮ ಮರಳುಗಾರಿಕೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿಯಮದ ಪ್ರಕಾರ ಸೇತುವೆಯ ಎರಡೂ ಭಾಗದ ತಲಾ 100 ಮೀ. ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸುವಂತಿಲ್ಲ. ಆದರೆ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಎಂ.ಸಿ. ಕೃಷ್ಣವೇಣಿ ಮಾರ್ಗದರ್ಶನದಂತೆ ಗಣಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗವು ದಾಳಿ ನಡೆಸಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!