ಕಾರ್ಕಳ ತಾಲ್ಲೂಕಿನ ನಿಟ್ಟೆ ಗ್ರಾಮದ ದೂಪದಕಟ್ಟೆ ರಾಜ್ಯ ಹೆದ್ದಾರಿಯ ಸಮೀಪ ಉದ್ಯಮಿಯೊಬ್ಬರು ಮಂಗಳವಾರ ನಸುಕಿನ ವೇಳೆ ಕಾರಿನಲ್ಲೇ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. .

ಮೃತರನ್ನು ದಿಲೀಪ್ ಎನ್.ಆರ್. ಎಂದು ಗುರ್ತಿಸಲಾಗಿದ್ದು, ಕಾರ್ಕಳದ ನಿವಾಸಿಯಾದ ಇವರು ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದರು ಎನ್ನಲಾಗುತ್ತಿದೆ. ಆತ್ಮಹತ್ಯೆಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



