ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ.

ಘಟನೆ ಪರಿಣಾಮ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬಕ್ಕೆ ಮತ್ತು ಲಾರಿಗೆ ಹಾನಿ ಉಂಟಾಗಿದೆ. ಈ ಬಗ್ಗೆ ಸ್ಥಳೀಯ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



