ಜನ ಮನದ ನಾಡಿ ಮಿಡಿತ

Advertisement

ಬೆಳಗಾವಿ : BJP ಆಡಳಿತದಲ್ಲೇ ಭಾರತದ ಮೇಲೆ ಉಗ್ರರ ದಾಳಿ ಹೆಚ್ಚು ಎಂದ ಸುರ್ಜೇವಾಲಾ

ದೇಶದಲ್ಲಿ ಬಿಜೆಪಿ ಸರಕಾರ ಇದ್ದಾಗಲೇ ಸಾಕಷ್ಟು ಬಾರಿ ಭಯೋತ್ಪಾದಕ ದಾಳಿಗಳಾಗಿವೆ. ಇದನ್ನು ಗಮನಿಸಿದರೆ ಬಿಜೆಪಿ ಮತ್ತು ಉಗ್ರರ ನಡುವೆ ಬಿಟ್ಟಿರಲಾರದ ಸಂಬಂಧ ಇದ್ದಂತಿದೆ. ದೇಶದ ಮೇಲೆ ದಾಳಿ ಆದಾಗ ಬಿಜೆಪಿ ಸರ್ಕಾರವೇ ಯಾಕಿರುತ್ತದೆ? ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಪ್ರಶ್ನಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗಲೇ ದೇಶದ ಸಂಸತ್‌ ಮೇಲೆ ದಾಳಿ, ವಿಮಾನ ಹೈಜಾಕ್‌ ಮಾಡಲಾಗಿದೆ. ಮೋದಿ ಪ್ರಧಾನಿ ಆದ ಬಳಿಕವೇ ಪಠಾಣ್‌ ಕೋಟ್‌ ಮೇಲೆ ಉಗ್ರರ ದಾಳಿ ಆಯಿತು. ಉರಿ ಸೇನಾ ನೆಲೆ ಮೇಲೆ ದಾಳಿ, ಪುಲ್ವಾಮಾದಲ್ಲಿ ಸೇನಾ ವಾಹನ ಮೇಲೆ ಉಗ್ರರು ದಾಳಿ ಮಾಡಿದ್ದಾರೆ. ಅಮರನಾಥ ಯಾತ್ರಾರ್ಥಿಗಳ ಹತ್ಯೆ ಹಾಗೂ ಈಗ ಪಹಲ್ಗಾಮ್‌ನಲ್ಲಿನ ದಾಳಿ ಮಾಡಲಾಗಿದೆ. ಇದಕ್ಕೆ ಕಾರಣ ಏನು ಮೋದಿಯವರೇ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯ ಪಾಕಿಸ್ತಾನ ಪ್ರೇಮವನ್ನು ರಾಜ್ಯ ಬಿಜೆಪಿ ನಾಯಕರಿಗೆ ನೆನಪಿಸಬೇಕಿದೆ. ದೇಶದ ಇತಿಹಾಸದಲ್ಲೇ ಆಹ್ವಾನ ಇಲ್ಲದೇ ಪಾಕಿಸ್ತಾನಕ್ಕೆ ಹೋಗಿದ್ದು ಪ್ರಧಾನಿ ಮೋದಿ ಮಾತ್ರ. ಪಾಕ್‌ಗೆ ಹೋಗಿ ಮೋದಿ ಕೇಕ್ ಕತ್ತರಿಸಿ ಬಂದಾಗ ಪಠಾಣ್‌ಕೋಟ್ ದಾಳಿ ರಿಟರ್ನ್ ಗಿಫ್ಟ್ ಆಗಿ ಪಾಕಿಸ್ತಾನ ಕೊಟ್ಟಿತ್ತು. ಮೋದಿ ಪ್ರಧಾನಿ, ಅಮಿತ್ ಶಾ ಗೃಹಮಂತ್ರಿ ಇದ್ದಾಗ ಬಿಜೆಪಿ ಸರ್ಕಾರ ಪಠಾಣ್‌ಕೋಟ್ ದಾಳಿ ತನಿಖೆಗೆ ಐಎಸ್‌ಐಯನ್ನು ಭಾರತಕ್ಕೆ ಆಹ್ವಾನಿಸಿತ್ತು.

ಹಲವು ಬಾರಿ ಬಿಜೆಪಿ ನಾಯಕರು ಹಾಗೂ ಐಎಸ್‌ಐಗೆ ಲಿಂಕ್ ಇದೆ‌‌. ಬಜರಂಗದಳದ ಬಲರಾಮ್ ಸಿಂಗ್ ಐಎಸ್ಐ ಪರ ಕೆಲಸ ಮಾಡುತ್ತಿದ್ದಾಗ ಸಿಕ್ಕಿಕೊಂಡಿದ್ದರು. ಡಿಆರ್‌ಡಿಒದಲ್ಲಿ ಕೆಲಸ ಮಾಡುತ್ತಿದ್ದ ಪ್ರದೀಪ್ ಐಎಸ್ಐ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ಆರ್‌ಎಸ್‌ಎಸ್ ಜೊತೆ ಸಂಬಂಧ ಇತ್ತು ಇಲ್ವಾ..? ಜಮ್ಮು ಕಾಶ್ಮೀರದಲ್ಲಿ ಆಸೀಫಾರನ್ನು ಬೇಟಿ ಬಚಾವೋ ಬೇಟಿ ಪಡಾವೋ ಮುಖವಾಡ ಹಾಕಿದ್ದ ಬಿಜೆಪಿ, ಅದೇ ಆಸೀಫಾ ಪಾಕ್‌ನಲ್ಲಿ ಉಗ್ರನ ಜೊತೆ ಸೇರಿ ಭಾರತದ ವಿರುದ್ಧ ವಿಷಕಾರಿದ್ದಳು ಅಲ್ಲವೇ? ಎಂದು ಪ್ರಶ್ನಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!