ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿರುವ ಕೊಲೆ ಬೆದರಿಕೆ; FIR ದಾಖಲು

ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪೈಲ್ ಮತ್ತು ಬಜರಂಗದಳದ ಮುಖಂಡ ಭರತ್ ಕುಮ್ಡೇಲ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿರುವ ವಿಚಾರವಾಗಿ ಕದ್ರಿ ಮತ್ತು ಬಂಟ್ವಾಳ ಗ್ರಾಮಾಂತರ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬು ಅವರಿಗೂ ಬೆದರಿಕೆ ಇದ್ದು, ಆ ಬಗ್ಗೆಯೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಶರಣ್ ಪಂಪೈಲ್‌ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿದ್ದರು. “ಮುಂದಿನ ಟಾರ್ಗೆಟ್ ಶರಣ್ ಪಂಪೈಲ್” ಎಂದು ಪೋಸ್ಟ್ ಮಾಡಿದ್ದರು. “ಮುಂದಿನ ಟಾರ್ಗೆಟ್ ಶರಣ್ ಪಂಪೈಲ್. ಶರಣ್ ಹತ್ಯೆಯಾಗಲು ತಯಾರಾಗು” ಎಂದು ಸಾಮಾಜಿಕ ಮಾಧ್ಯಮ ಸಂದೇಶದಲ್ಲಿ ಬೆದರಿಕೆ ಹಾಕಲಾಗಿತ್ತು.

ಶರಣ್ ಪಂಪೈಲ್ ಮಾತ್ರವಲ್ಲದೆ ಇನ್ನೂ ಕೆಲವು ಮಂದಿ ಮುಖಂಡರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಬೆದರಿಕೆ ಹಾಕಲಾಗಿದೆ. ಬಜರಂಗದಳ ಮುಖಂಡ ಭರತ್ ಕುಮ್ಡೇಲ್ ಹತ್ಯೆ ಬೆದರಿಕೆ ಸಂದೇಶ ವಿಚಾರವಾಗಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಎನ್‌ಎಸ್ ಕಾಯ್ದೆ 196(1)(C), 353(2) ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ. “ಅಶ್ರಫ್ ಕೊಂದ ಭರತ್‌ನನ್ನು ಮರೆತಿಲ್ಲ ಎಂದು ಪೋಸ್ಟ್ ಹಾಕಿದ್ದಾರೆ.

ಇನ್ನು ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಕೊಲೆ ಬೆದರಿಕೆ ಹಾಕಿದ ಕೆ.ಆರ್ ರಾಕೇಶ್ ವಿರುದ್ಧ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಿಸಲಾಗಿದೆ. ಯೂಟ್ಯೂಬ್‌ನಲ್ಲಿ ಸುಹಾಸ್‌ ಶೆಟ್ಟಿ ಕೊಲೆ ಸುದ್ದಿ ಪ್ರಸಾರವಾಗುತ್ತಿದ್ದ ವೇಳೆ ಕಮೆಂಟ್ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. “Next is Riyaz Kadanbu hit list” ಎಂದು ಕಮೆಂಟ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ರಿಯಾಜ್ ಕಡಂಬು ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!