ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಬಗ್ಗೆ ಜಾಲತಾಣದಲ್ಲಿ ಪೋಸ್ಟ್ಗಳನ್ನು ಪ್ರಕಟಿಸಿರುವ ಕಾರಣ ಪೊಲೀಸರು ಕಠಿಣ ಕ್ರಮಗಳಿಗೆ ಮುಂದಾಗಿದ್ದಾರೆ.

‘ರಾತ್ರಿ 9.30ಕ್ಕೆ ಭರತ್ ಕುಮ್ಡೇಲ್ ಕೊಲ್ಲುತ್ತೇವೆ’ ಎಂದು ಸಂದೇಶ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಸೋಮವಾರ ರಾತ್ರಿ 9.30ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ. ಹೋಟೆಲ್, ಪಬ್, ಬಾರ್ಗಳು, ಫುಟ್ಪಾತ್ ವ್ಯಾಪಾರವನ್ನು ರಾತ್ರಿ 9.30 ರ ಒಳಗೆ ಬಂದ್ ಮಾಡಿಸಲಾಗುತ್ತಿದೆ. ಜನರನ್ನು ಬೇಗನೆ ಮನೆ ಸೇರಿಸುವ ಯತ್ನದಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ಇನ್ನೂ ಕೆಲವು ದಿನಗಳ ಕಾಲ ಇದನ್ನೇ ಮುಂದುವರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.



