ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ದೇಶಾದ್ಯಂತ ನಾಳೆ ಮಾಕ್ ಡ್ರಿಲ್; ರಾಜ್ಯದ ಮೂರು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಸಾಧ್ಯತೆ

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕರಿಛಾಯೆ ಜೋರಾಗುತ್ತಿದ್ದು, ಹೀಗಾಗಿ ಮೊನ್ನೆ ಪಂಜಾಬ್​ ಗಡಿಯಲ್ಲಿ ಸೇನೆ ಮಾಕ್​ ಡ್ರಿಲ್ ಮಾಡಿದಂತೆ ದೇಶಾದ್ಯಂತ ಮಾಕ್​ ಡ್ರಿಲ್​​ ಮಾಡಲು ಸರ್ಕಾರ ಆಜ್ಞೆ ಹೊರಡಿಸಿದೆ. ಜಿಲ್ಲೆಗಳಿಂದ ಹಳ್ಳಿವರೆಗೂ ಈ ಕವಾಯತು ನಡೆಸಲು ಸೂಚಿಸಲಾಗಿದೆ.

ನಾಗರಿಕರ ರಕ್ಷಣೆ ಸಂಬಂಧ ನಾಳೆ ದೇಶಾದ್ಯಂತ ಅಣಕು ಪ್ರದರ್ಶನ ಮಾಡಿಸಲು ಸೂಚಿಸಿದೆ. ಎಲ್ಲಾ ರಾಜ್ಯಗಳಲ್ಲಿ ವಾಯುದಾಳಿಯ ಸೈರನ್‌ ವ್ಯವಸ್ಥೆ ಇರುವಂತೆ ನೋಡಿಕೊಳ್ಳಿ ಎಂದು ಸೂಚಿಸಿದೆ. ದೇಶದ 244 ವರ್ಗೀಕೃತ ಜಿಲ್ಲೆಗಳಿಂದ ಗ್ರಾಮ ಮಟ್ಟದವರೆಗೂ ಮಾಕ್​ ಡ್ರಿಲ್​​ ಆಯೋಜಿಸಲು ಕೇಂದ್ರ ಆಜ್ಞೆ ಹೊರಡಿಸಿದೆ.

ಸದ್ಯದ ಮಾಹಿತಿ ಪ್ರಕಾರ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ ಸೇರಿದಂತೆ ಪಾಕಿಸ್ತಾನದ ಜೊತೆ ಗಡಿ ಹಂಚಿಕೊಂಡಿರುವ ರಾಜ್ಯಗಳ ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಯಲಿದೆ. ಅದರ ಜೊತೆಗೆ ದೇಶದ ಪ್ರಮುಖ ವಾಣಿಜ್ಯ ನಗರ ಮತ್ತು ನೌಕಾನೆಲೆ, ಸ್ಥಾವರಗಳನ್ನು ಹೊಂದಿರುವ ಜಿಲ್ಲೆಗಳಲ್ಲೂ ಯುದ್ಧ ಕವಾಯತು ನಡೆಯುವ ಸಾಧ್ಯತೆ ಇದೆ.

ರಾಜ್ಯದ ವಿಚಾರಕ್ಕೆ ಬಂದಾಗ ಮೂರು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಸಾಧ್ಯತೆ ಇದೆ. ಕರ್ನಾಟಕದ ರಾಯಚೂರು, ಕಾರವಾರ ಮತ್ತು ಬೆಂಗಳೂರಿನಲ್ಲಿ ಮಾಕ್ ಡ್ರಿಲ್ ಸಾಧ್ಯತೆ ಇದೆ. ರಾಯಚೂರಲ್ಲಿ ಥರ್ಮಲ್ ಪವರ್ ಪ್ಲಾಂಟ್ ಇರುವ ಹಿನ್ನೆಲೆಯಲ್ಲಿ ಡ್ರಿಲ್ ನಡೆಯುವ ಸಾಧ್ಯತೆ ಇದೆ. ಇನ್ನು, ಬೆಂಗಳೂರಲ್ಲೂ ಯುದ್ಧ ಕವಾಯತು ನಿರೀಕ್ಷೆ ಮಾಡಲಾಗಿದೆ. ಬೆಂಗಳೂರು ಭಾರತದ ಸಿಲಿಕಾನ್ ವ್ಯಾಲಿ. ದೇಶದ ಪ್ರಮುಖ ವಾಣಿಜ್ಯ ಚಟುವಟಿಕೆಗಳ ಮೂಲವೇ ಬೆಂಗಳೂರು. ಕಾರವಾರದಲ್ಲಿ ನೌಕಾನೆಲೆ ಇರುವುದರಿಂದ ಮ್ಯಾಕ್ ಡ್ರಿಲ್ ಅವಶ್ಯಕತೆ ಇದೆ ಎಂದು ಕೇಂದ್ರ ಚಿಂತಿಸಿದೆ.

 

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!