ಜನ ಮನದ ನಾಡಿ ಮಿಡಿತ

Advertisement

ಮುಂಬೈ : ಐಪಿಎಲ್ ನಲ್ಲಿ ಇಂದು MI v/s GT ; ಬಲಿಷ್ಠ ತಂಡಗಳೆರಡರ ಸೆಣಸಾಟ

ಈ ಬಾರಿ ಐಪಿಎಲ್‌ನ ಪ್ಲೇ-ಆಫ್‌ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ಎರಡು ತಂಡಗಳಾದ ಮುಂಬೈ ಇಂಡಿಯನ್ಸ್‌ ಹಾಗೂ ಗುಜರಾತ್‌ ಟೈಟಾನ್ಸ್‌ ಮಂಗಳವಾರ ಪರಸ್ಪರ ಸೆಣಸಾಡಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡದ ಪ್ಲೇ-ಆಫ್ ಸ್ಥಾನ ಬಹುತೇಕ ಖಚಿತವಾಗಲಿದೆ.

ಸದ್ಯ ಮುಂಬೈ ತಂಡ ಆಡಿರುವ 11ರಲ್ಲಿ 7 ಪಂದ್ಯ ಗೆದ್ದಿದ್ದರೆ, ಗುಜರಾತ್‌ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿದೆ. 5 ಬಾರಿ ಚಾಂಪಿಯನ್‌ ಮುಂಬೈ ತಂಡಕ್ಕೆ ಉಳಿದ 3ರಲ್ಲಿ 2 ಪಂದ್ಯ ಗೆದ್ದರೆ ಅಧಿಕೃತವಾಗಿ ನಾಕೌಟ್‌ಗೇರಲಿದೆ. ಒಂದರಲ್ಲಿ ಗೆದ್ದರೂ ತಂಡಕ್ಕೆ ನಾಕೌಟ್‌ ರೇಸ್‌ನಲ್ಲಿ ಉಳಿದುಕೊಳ್ಳಲಿದೆ. ಈ ಬಾರಿ ತವರಿನಲ್ಲಿ ಆಡಿರುವ 5 ಪಂದ್ಯಗಳ ಪೈಕಿ 4ರಲ್ಲಿ ಗೆದ್ದಿರುವ ತಂಡ, ವಾಂಖೆಡೆಯಲ್ಲಿ ಇನ್ನೂ 2 ಪಂದ್ಯ ಆಡಬೇಕಿದೆ. ಹೀಗಾಗಿ ತಂಡ ಪ್ಲೇ-ಆಫ್‌ಗೇರುವ ಸಾಧ್ಯತೆ ಹೆಚ್ಚಿದೆ.

ಮತ್ತೊಂದೆಡೆ ಗುಜರಾತ್‌ಗೆ ಇನ್ನು 4 ಪಂದ್ಯ ಬಾಕಿಯಿದೆ. ಇದರಲ್ಲಿ 2 ಪಂದ್ಯಗಳನ್ನು ತವರಿನಲ್ಲಿ ಆಡಲಿದೆ. ಮುಂಬೈ ವಿರುದ್ಧ ಅದರದೇ ತವರಿನಲ್ಲಿ ಗೆಲ್ಲುವ ಮೂಲಕ ಪ್ಲೇ-ಆಫ್‌ ಹಾದಿಯನ್ನು ಮತ್ತಷ್ಟು ಸುಗಮಗೊಳಿಸುವುದು ತಂಡದ ಗುರಿ. ಅಲ್ಲದೆ, ಮುಂಬೈ ವಿರುದ್ಧ ಈ ಬಾರಿ ಮೊದಲ ಮುಖಾಮುಖಿಯಲ್ಲಿ ಗೆದ್ದಿದ್ದ ಗುಜರಾತ್‌, ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ.

Leave a Reply

Your email address will not be published. Required fields are marked *

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

error: Content is protected !!