ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದ ಬಿ.ವಿ.ಶ್ರೀನಿವಾಸರೆಡ್ಡಿ ಮತ್ತು ಮುಖ್ಯಸ್ಥನಾಗಿದ್ದ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಮೂಲಕ ಗಾಲಿ ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಇನ್ನು, ಇದೇ ಪ್ರಕರಣದಲ್ಲಿ ವಿ.ಡಿ.ರಾಜಗೋಪಾಲ್, ದಿ. ರಾವ್ ಲಿಂಗಾರೆಡ್ಡಿ, ಕೆ.ಮೆಹಫೂಸ್ ಅಲಿ ಖಾನ್, ಬಿವಿ ಶ್ರೀನಿವಾಸ್ ರೆಡ್ಡಿ ಮತ್ತು ಓಎಂಸಿ ಕಂಪನಿ ಕೂಡ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ. ಈ ಅಪರಾಧವು ಐಪಿಸಿಯ ಸೆಕ್ಷನ್ 120B ಜೊತೆಗೆ 420, 409, 468, 471 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13 (2) ಜೊತೆಗೆ 13 (1)(d) ಅಡಿಯಲ್ಲಿ ಸಾಬೀತಾಗಿದೆ.



