ಜನ ಮನದ ನಾಡಿ ಮಿಡಿತ

Advertisement

ಶ್ರೀನಗರ: ಗಡಿ ನುಸುಳಿದ ಪಾಕಿಸ್ಥಾನಿಯ ಬಂಧನ

ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಭಾರತೀಯ ಭದ್ರತಾ ಪಡೆಗಳು ಬಂಧಿಸಿವೆ. ಕಾಶ್ಮೀರದ ಪೂಂಚ್ ವಲಯದ ನಿಯಂತ್ರಣ ರೇಖೆಯ ಬಳಿ ಭಾರತೀಯ ಸೇನೆಯು ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಇದಕ್ಕೂ ಮೊದಲು, ಪಾಕಿಸ್ತಾನದ ಗಡಿಯನ್ನು ಅಜಾಗರೂಕತೆಯಿಂದ ದಾಟಿದ್ದಕ್ಕಾಗಿ ಬಿಎಸ್‌ಎಫ್ ಕಾನ್‌ಸ್ಟೆಬಲ್‌ನನ್ನು ಪಾಕಿಸ್ತಾನ ವಶಕ್ಕೆ ಪಡೆದ ಕೆಲವು ದಿನಗಳ ನಂತರ, ರಾಜಸ್ಥಾನದಲ್ಲಿ ಪಾಕಿಸ್ತಾನಿ ರೇಂಜರ್‌ನನ್ನು ಬಂಧಿಸಲಾಗಿತ್ತು.

ಏಪ್ರಿಲ್‌ನಲ್ಲಿ, ತಪ್ಪಾಗಿ ಗಡಿ ದಾಟಿ ಪಾಕಿಸ್ತಾನಕ್ಕೆ ಪ್ರವೇಶಿಸಿದ್ದ ಬಿಎಸ್‌ಎಫ್ ಕಾನ್‌ಸ್ಟೆಬಲ್ ಪೂರ್ಣಮ್ ಕುಮಾರ್ ಶಾ ಅವರನ್ನು ಪಾಕಿಸ್ತಾನ ವಶಕ್ಕೆ ಪಡೆದುಕೊಂಡಿದೆ. ಹಲವಾರು ಸುತ್ತಿನ ಮಾತುಕತೆ ಬಳಿಕೂ ಪಾಕಿಸ್ತಾನ ಯೋಧನನ್ನು ಬಿಡುಗಡೆ ಮಾಡಲು ಒಪ್ಪಿಗೆ ನೀಡಿಲ್ಲ. ಪಂಜಾಬ್‌ನ ಫಿರೋಜ್‌ಪುರ ಸೆಕ್ಟರ್‌ನಲ್ಲಿ ಬಿಎಸ್‌ಎಫ್‌ ಜವಾನ್ ಪಿ.ಕೆ ಸಿಂಗ್ ಆಕಸ್ಮಿಕವಾಗಿ ಗಡಿ ದಾಟಿದ್ದರು. ಭಾರತದ ಗಡಿಯಲ್ಲಿ ಬೇಹುಗಾರಿಕೆ ನಡೆಸುತ್ತಿದ್ದ ಪಾಕಿಸ್ತಾನಿ ರೇಂಜರ್ಸ್‌ ಯೋಧನನ್ನು ಭಾರತದ ಗಡಿ ಭದ್ರತಾ ಪಡೆ ಶನಿವಾರ ವಶಕ್ಕೆ ಪಡೆದುಕೊಂಡಿದೆ . ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಪಾಕಿಸ್ತಾನಿ ರೇಂಜರ್‌ನನ್ನು ಬಂಧಿಸಿದ್ದಾರೆ. ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದಾಗ ಆತನನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತದ ಗಡಿಯಲ್ಲಿ ಬೇಹುಗಾರಿಕೆ ನಡೆಸುತ್ತಿದ್ದಾಗ ಬಹಾವಲ್ಪುರ್ ವಲಯದಿಂದ ಬಿಎಸ್‌ಎಫ್‌ ಪಾಕಿಸ್ತಾನಿ ರೇಂಜರ್‌ನನ್ನು ಬಂಧಿಸಿದ್ದಾಗಿ ವರದಿಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!