ಜನ ಮನದ ನಾಡಿ ಮಿಡಿತ

Advertisement

ಸುಹಾಸ್ ಶೆಟ್ಟಿ ಪ್ರಕರಣದ ತನಿಖೆ ನಡೆಯುತ್ತಿಲ್ಲ ಎಂದು ರಾಜ್ಯಪಾಲರಿಗೆ ದೂರು ನೀಡಲು BJP ನಿರ್ಧಾರ

ಮೇ 1 ರಂದು ರಾತ್ರಿ ಬಜ್ಪೆ ಸಮೀಪ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಪ್ರಕರಣದ ಬಗ್ಗೆ ಸರಿಯಾದ ತನಿಖೆ‌ನಡೆಯುತ್ತಿಲ್ಲ ಎಂದು ವ್ಯಗ್ರರಾಗಿರುವ ಕರಾವಳಿಯ ಬಿಜೆಪಿ ಶಾಸಕರು ಮತ್ತು ಸಂಸದರು ರಾಜ್ಯಪಾಲರಿಗೆ ದೂರು ನೀಡಲು ಮುಂದಾಗಿದ್ದಾರೆ.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಪದೇ ಪದೇ ರೌಡಿ ಶೀಟರ್ ಎಂದು ಬಿಂಬಿಸುತ್ತಿರುವುದಕ್ಕೆ ಬಿಜೆಪಿ ಆರಂಭದಿಂದಲೂ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಇದಲ್ಲದೆ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದವರೇ ಆರೋಪಿಗಳಾಗಿ ಬಂಧಿತರಾಗಿದ್ದಾರೆ. ಜಿಲ್ಲೆಗೆ ಭೇಟಿ ನೀಡಿದ ಗೃಹ ಸಚಿವರು ಸುಹಾಸ್ ಶೆಟ್ಟಿ ಅವರ ಮನೆಗೆ ಭೇಟಿ ನೀಡಿಲ್ಲ. ಆದರೆ ಮುಸ್ಲಿಂ ಸಂಘಟನೆಗಳ ಜೊತೆ ಸಭೆ‌ ನಡೆಸಿದ್ದಾರೆ. ಸೌಜನ್ಯಕ್ಕಾಗಿಯಾದರೂ ಶಾಸಕರ ಸಭೆ‌ ಕರೆದಿಲ್ಲ, ಅವರನ್ನು‌ ಮಾತನಾಡಿಸಿಯೂ ಇಲ್ಲ ಎಂದು ಬಿಜೆಪಿ ಆರೋಪಿಸುತ್ತಿದೆ. ಈ ಅಸಮಾಧಾನ ಈಗ ಕುದಿಬಿಂದು ತಲುಪಿದ್ದು ಶುಕ್ರವಾರದಂದು ಜಿಲ್ಲೆಯ ಶಾಸಕರು ದೂರರ್ಜಿ‌ ಹಿಡಿದು ರಾಜ್ಯಪಾಲರನ್ನು ಭೇಟಿಯಾಗುವುದಕ್ಕೆ ಮುಹೂರ್ತ ನಿಗದಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!