ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಪಾದಚಾರಿ ಮಹಿಳೆ ಕಾರು ಢಿಕ್ಕಿ ; ದಾರುಣ ಸಾವು

ಪಾದಚಾರಿ ಮಹಿಳೆಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕುತ್ತಾರ್ ಸಮೀಪದ ಪಂಡಿತ್ ಹೌಸ್ ಎಂಬಲ್ಲಿ ಸಂಭವಿಸಿದೆ.

ಪಂಡಿತ್ ಹೌಸ್ ನಿವಾಸಿ ಪೂರ್ಣಿಮ(59)ಮೃತ ಮಹಿಳೆ. ಬಸ್ಸಿನಿಂದ ಇಳಿದು ರಸ್ತೆ ದಾಟುವ ಸಂದರ್ಭ ವೈದ್ಯಕೀಯ ವಿದ್ಯಾರ್ಥಿ ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಪೂರ್ಣಿಮಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೇ.16 ರಂದು ಪೂರ್ಣಿಮಾ ಅವರ ಬಾವ (ಪತಿಯ ಸಹೋದರ)ನ ಪುತ್ರನ ವಿವಾಹ ಸಮಾರಂಭವಿತ್ತು. ಆ ಪ್ರಯುಕ್ತ ಮದುವೆ ಮನೆಗೆ ತೆರಳಿ ವಾಪಸ್ಸಾಗುವಾಗ ಈ ದುರಂತ ಸಂಭವಿಸಿದೆ. ಇದೀಗ ಮದುವೆ ಮನೆಯಲ್ಲಿ ಶೋಕತಪ್ತ ವಾತಾವರಣ ಮನೆ ಮಾಡಿದೆ. ತೊಕ್ಕೊಟ್ಟು- ಮಂಗಳೂರು ವಿ.ವಿ ರಸ್ತೆಯ ಪಂಡಿತ್ ಹೌಸ್ ನಲ್ಲಿ ಪೈಪ್ ಲೈನ್ ಕಾಮಗಾರಿಗಾಗಿ ರಸ್ತೆಯನ್ನು ಅಗೆಯಲಾಗಿತ್ತು. ತದನಂತರ ಡಾಮರೀಕರಣ ನಡೆಸದೆ ಹೊಂಡಮಯವಾಗಿತ್ತು. ನೂತನವಾಗಿ ಡಾಮರೀಕರಣ ನಡೆಸಿದ ರಸ್ತೆಯ ನಡುವೆ ಇರುವ ಹೊಂಡ ತಕ್ಷಣಕ್ಕೆ ಗೋಜಿಗೆ ಬರುತ್ತಿಲ್ಲ. ಇದರಿಂದ ಕಾರು ಚಾಲಕ ಆಯತಪ್ಪಿ ಮಹಿಳೆಗೆ ಢಿಕ್ಕಿ ಹೊಡೆದಿದ್ದಾನೆನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತಿ, ಓರ್ವ ಪುತ್ರನನ್ನು ಅಗಲಿದ್ದಾರೆ.

 

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!