ಜನ ಮನದ ನಾಡಿ ಮಿಡಿತ

Advertisement

ಐಪಿಎಲ್ ಅಭಿಮಾನಿಗಳಿಗೆ ಸಿಹಿಸುದ್ದಿ.. ಮುಂದಿನ ಎಲ್ಲಾ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುತ್ತಾ….?

2025ರ ಐಪಿಎಲ್ ಟೂರ್ನಿಯನ್ನ ಮುಂದಿನ ಒಂದು ವಾರಗಳ ಕಾಲ ಪಂದ್ಯಾಟ ಮುಂದೂಡಲು ಬಿಸಿಸಿಐ ನಿರ್ಧರಿಸಿದ್ದು ನಂತರದ ವೇಳಾಪಟ್ಟಿ, ಟೂರ್ನಿ ನಡೆಯುವ ಸ್ಥಳಗಳ ಮಾಹಿತಿಯನ್ನ ನಂತರದಲ್ಲಿ ನೀಡಲಾಗುವುದು ಎಂದು ಬಿಸಿಸಿಐ ತಿಳಿಸಿದೆ.

ಈ ಕಠಿಣ ಪರಿಸ್ಥಿತಿಯಲ್ಲಿ ಬಿಸಿಸಿಐ ದೇಶದ ಜೊತೆಗೆ ನಿಲ್ಲುತ್ತದೆ ಎಂದು ಭರವಸೆಯನ್ನು ಕೊಟ್ಟಿದೆ ಹಾಗೆಯೇ ಭಾರತ ಸರ್ಕಾರ, ಭಾರತೀಯ ಸೇನೆ, ಹಾಗೂ ಈ ದೇಶದ ಜನರೊಂದಿಗೆ ನಾವು ನಿಲ್ಲುತ್ತೇವೆ ಎಂದು ತಿಳಿಸಿದೆ . ಕ್ರಿಕೆಟ್ ಈ ದೇಶದ ಪ್ಯಾಷನ್. ಈ ದೇಶಕ್ಕಿಂತ ಯಾವುದು ದೊಡ್ಡದಿಲ್ಲ. ಸಶಸ್ತ್ರ ಪಡೆಗಳ ಧೈರ್ಯ, ಶೌರ್ಯ ಮತ್ತು ನಿಸ್ವಾರ್ಥ ಸೇವೆಯನ್ನ ಗೌರವಿಸುತ್ತೇವೆ. ಆಪರೇಷನ್ ಸಿಂಧೂರ ಅಡಿಯಲ್ಲಿ ರಾಷ್ಟ್ರವನ್ನ ರಕ್ಷಿಸುತ್ತಿರೋ ಸೇನೆಗೆ ಸೆಲ್ಯೂಟ್ ಎಂದು ಬಿಸಿಸಿಐ ಹೇಳಿಕೆ ನೀಡಿದೆ. ಒಂದು ವಾರದ ಬಳಿಕ ಪರಿಸ್ಥಿತಿ ಸುದಾರಿಸಿದ್ರೂ ರಿಸ್ಕ್ ತೆಗೆದುಕೊಳ್ಳಲು ಬಿಸಿಸಿಐ ರೆಡಿಯಿಲ್ಲ. ಹೀಗಾಗಿ ಗಡಿ ಭಾಗದ ಬದಲಾಗಿ ಸೌತ್ ಇಂಡಿಯಾದಲ್ಲಿ ಉಳಿದ ಪಂದ್ಯಗಳನ್ನ ಆಯೋಜಿಸೋ ಬಗ್ಗೆ ಚರ್ಚೆ ನಡೆಸಲಾಗತ್ತಿದೆ. ಬೆಂಗಳೂರು, ಹೈದ್ರಾಬಾದ್‌ನಲ್ಲಿ ಬಹುತೇಕ ಉಳಿದ ಪಂದ್ಯಗಳನ್ನ ನಡೆಸೋ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

 

ಒಂದು ವೇಳೆ ಸಾಧ್ಯವಾಗದಿದ್ದರೆ ಸಪ್ಟೆಂಬರ್ ಬಳಿಕವೇ ಐಪಿಎಲ್ ನಡೆಯೋ ಸಾಧ್ಯತೆಯಿದೆ. ಮುಂದಿನ ತಿಂಗಳು ಸೌತ್ ಆಫ್ರಿಕಾ-ಆಸ್ಟ್ರೇಲಿಯಾ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಡೆಯಲಿದೆ. ಭಾರತ ತಂಡ ಇಂಗ್ಲೆ0ಡ್ ಪ್ರವಾಸಕ್ಕೆ ತೆರಳಲಿದೆ. ಅಗಸ್ಟ್ನಲ್ಲಿ ನಡೆಸೋದಾದ್ರೆ ಟೀಮ್ ಇಂಡಿಯಾದ ಬಾಂಗ್ಲಾದೇಶ ಟೂರ್ ಡಿಶೆಡ್ಯೂಲ್ ಮಾಡಬೇಕಾಗುತ್ತದೆ. ಜೊತೆಗೆ ಇಂಗ್ಲೆ0ಡ್ ಹಾಗೂ ಸೌತ್ ಆಫ್ರಿಕಾ ನಡುವೆ ಅಗಸ್ಟ್ನಲ್ಲಿ ವೈಟ್‌ಬಾಲ್ ಸರಣಿಯಿದೆ. ಸೆಪ್ಟೆಂಬರ್‌ನಲ್ಲಿ 2 ವಾರಗಳ ವಿಂಡೋ ಸಿಗಲಿದೆ. ಅದೇ ತಿಂಗಳು ನಡೆಯೋ ಏಷ್ಯಾಕಪ್ ಟೂರ್ನಿಯನ್ನೂ ಕ್ಯಾನ್ಸಲ್ ಮಾಡಿ ಐಪಿಎಲ್ ನಡೆಸೋ ಚರ್ಚೆಯೂ ನಡೀತಾ ಇದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!