ಜನ ಮನದ ನಾಡಿ ಮಿಡಿತ

Advertisement

ಮೇ 20ರಂದು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ದೇಶವ್ಯಾಪಿ ಮುಷ್ಕರ..!

ಉಡುಪಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಮೇ 20 ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ್ ಅವರು, ಉಡುಪಿ ಜಿಲ್ಲಾ ಸಮಿತಿ ವತಿಯಿಂದಲೂ ಮುಷ್ಕರವು ಉಡುಪಿ, ಕುಂದಾಪುರ, ಬೈಂದೂರಿನಲ್ಲಿ ನಡೆಯಲಿದೆ. ಈ ಮುಷ್ಕರದಲ್ಲಿ ಬ್ಯಾಂಕ್, ಎಲ್ಐಸಿ, ಅಂಚೆ, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ಉಡುಪಿಯ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಮೆರವಣಿಗೆ ಆರಂಭಗೊಂಡು, ಅಜ್ಜರಕಾಡು ಹುತಾತ್ಮ ಸ್ಮಾರಕದ ಮುಂಭಾಗ ಕೊನೆಗೊಳ್ಳಲಿದೆ. ನಂತರ ಸಭೆ ನಡೆಯಲಿದೆ. ಹಾಗೆಯೇ ಕುಂದಾಪುರದಲ್ಲಿ ಶಾಸ್ತ್ರಿ ವೃತ್ತದಿಂದ ಆರಂಭಗೊಂಡು, ಬಸ್ ನಿಲ್ದಾಣವರೆಗೆ ಸಾಗಿ, ಶಾಸ್ತ್ರಿ ಸರ್ಕಲ್ ಗೆ ವಾಪಾಸಾಗಿ ಸಭೆ ನಡೆಯಲಿದೆ ಎಂದು ತಿಳಿಸಿದರು.

ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಮೇ.17 ರಂದು ಉಡುಪಿ, ಕುಂದಾಪುರ, ಬೈಂದೂರು ಭಾಗಗಳಲ್ಲಿ ಪಾದಯಾತ್ರೆಯ ಮೂಲಕ ಕರಪತ್ರವನ್ನು ಹಂಚಲಿದ್ದೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಮಿತಿಯ ಪ್ರ‌‌‌.ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಜಿಲ್ಲಾ ಸಮಿತಿ ಕಾರ್ಯದರ್ಶಿಗಳಾದ ಶೇಖರ್ ಬಂಗೇರಾ, ಕವಿರಾಜ್‌.ಎಸ್‌.ಕೋಟ್ಯಾನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!